







ಪುತ್ತೂರು:ಪುತ್ತೂರಿನ ಶಿಕ್ಷಣ ಕ್ಷೇತ್ರದಲ್ಲಿ ವಿಶಿಷ್ಟ ಗುರುತನ್ನು ಮೂಡಿಸಿರುವ ಸಂಪ್ಯದಲ್ಲಿನ ಅಕ್ಷಯ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉದ್ಯೋಗಮುಖಿ ತರಬೇತಿಯನ್ನು ಒದಗಿಸುವ ಮೂಲಕ ಹೊಸ ಅಧ್ಯಾಯವನ್ನು ಆರಂಭಿಸಿದೆ. ಪುತ್ತೂರಿನಲ್ಲಿ ಪ್ರಥಮ ಬಾರಿಗೆ ಏವಿಯೇಷನ್, ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಹಾಗೂ ಹೊಟೇಲ್ ಮ್ಯಾನೇಜ್ಮೆಂಟ್ ಕೋರ್ಸುಗಳನ್ನು ಪರಿಚಯಿಸಿದ ಸಂಸ್ಥೆಯಾಗಿ ಅಕ್ಷಯ ಕಾಲೇಜು ಗುರುತಿಸಿಕೊಂಡಿದೆ.


ಏವಿಯೇಶನ್ ಕ್ಷೇತ್ರದಲ್ಲಿ ಅಭೂತಪೂರ್ವ ಸಾಧನೆ:
ಏವಿಯೇಷನ್ ಕ್ಷೇತ್ರದಲ್ಲಿ ಈಗಾಗಲೇ 50ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ವಿವಿಧ ಕಂಪನಿಗಳು ಹಾಗೂ ವಿಮಾನಯಾನ ಕ್ಷೇತ್ರಕ್ಕೆ ಪರಿಚಯಿಸಿರುವ ಅಕ್ಷಯ ಸಂಸ್ಥೆ, ಇದೀಗ ಪುತ್ತೂರಿನಲ್ಲಿ ಮೊದಲ ಬಾರಿಗೆ ವಿದ್ಯಾರ್ಥಿಗಳಿಗೆ ಅಂತಾರಾಷ್ಟ್ರೀಯ ಇಂಟರ್ನ್ಶಿಪ್ ಅವಕಾಶವನ್ನು ಕೂಡ ಕಲ್ಪಿಸಿದೆ. ಮಾರಿಷಸ್ ದೇಶಕ್ಕೆ ವಿದ್ಯಾರ್ಥಿಗಳನ್ನು ಕಳುಹಿಸುವ ಮೂಲಕ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೂ ಜಾಗತಿಕ ಮಟ್ಟದ ಅನುಭವವನ್ನು ನೀಡುವ ಪ್ರಯತ್ನವನ್ನು ಸಂಸ್ಥೆ ಮಾಡುತ್ತಿದೆ.



ಪದವಿಯೊಂದಿಗೆ ವೃತ್ತಿಪರ ಕೋರ್ಸುಗಳ ಸಂಯೋಜನೆ:
ಅಕ್ಷಯ ಕಾಲೇಜಿನಲ್ಲಿ ಬಿಕಾಂ, ಬಿಸಿಎ, ಬಿಎಸ್ಸಿ, ಬಿಎ ಹಾಗೂ ಬಿ.ಎಚ್.ಎಸ್ ಪದವಿ ಕೋರ್ಸುಗಳು ಲಭ್ಯವಿದ್ದು, ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಹಲವು ವಿಶೇಷ ವೃತ್ತಿಪರ ಕೋರ್ಸುಗಳನ್ನು ಪರಿಚಯಿಸಲಾಗಿದೆ. ಏವಿಯೇಷನ್, ಫ್ಯಾಷನ್ ಡಿಸೈನ್, ಇಂಟೀರಿಯರ್ ಡಿಸೈನ್, ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಮತ್ತು ಸೈಬರ್ ಸೆಕ್ಯೂರಿಟಿ, ಹಾಸ್ಪಿಟಾಲಿಟಿ ಸೈನ್ಸ್, ಲಾಜಿಸ್ಟಿಕ್ಸ್ ಹಾಗೂ ಸಪ್ಲೈ ಚೈನ್ ಮ್ಯಾನೇಜ್ಮೆಂಟ್ ಕ್ಷೇತ್ರಗಳಲ್ಲಿ ತರಬೇತಿ ನೀಡಲಾಗುತ್ತಿದೆ. ಜೊತೆಗೆ ಯುಪಿಎಸ್ಸಿ, ಕೆಪಿಎಸ್ಸಿ ತರಬೇತಿ ಹಾಗೂ ಚಾರ್ಟರ್ಡ್ ಅಕೌಂಟೆನ್ಸಿ ತರಬೇತಿಗೂ ಅವಕಾಶ ಕಲ್ಪಿಸಲಾಗಿದೆ.
ವಿದ್ಯಾರ್ಥಿಗಳ ಅಭಿವೃದ್ಧಿಗೆ ವಿಶೇಷ ಸೌಲಭ್ಯಗಳು:
ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಕೇವಲ ಪಾಠ ಪುಸ್ತಕ ಜ್ಞಾನ ಮಾತ್ರವಲ್ಲದೆ ಭವಿಷ್ಯದಲ್ಲಿನ ಕೌಶಲ್ಯಗಳನ್ನು ಕಲಿಸಲು ವಿಶೇಷ ಒತ್ತು ನೀಡಲಾಗುತ್ತಿದೆ. ಮಾರಿಷಸ್ ದೇಶಕ್ಕೆ ಅಂತಾರಾಷ್ಟ್ರೀಯ ಇಂಟರ್ನ್ಶಿಪ್ ಅವಕಾಶ, ಸಾಫ್ಟ್ ಸ್ಕಿಲ್ಸ್ ತರಬೇತಿ, ಶಿಕ್ಷಣ ಸಾಲ ಸೌಲಭ್ಯ, ಕ್ಯಾಂಪಸ್ ನೇಮಕಾತಿ ವ್ಯವಸ್ಥೆ ಮೂಲಕ ಉದ್ಯೋಗಾವಕಾಶ, ವ್ಯಕ್ತಿತ್ವ ವಿಕಾಸ ತರಬೇತಿ, ಉದ್ಯಮ ಕ್ಷೇತ್ರದ ಪರಿಣಿತರಿಂದ ವಿಶೇಷ ಕಾರ್ಯಾಗಾರಗಳು ಶಿಕ್ಷಣ ಸಂಸ್ಥೆಯಲ್ಲಿ ಲಭ್ಯವಿದೆ.
ಅಕ್ಷಯ ಪಿಯು ಕಾಲೇಜು, ಭದ್ರವಾದ ಭವಿಷ್ಯಕ್ಕೆ ಅಡಿಪಾಯ:
ಕಳೆದ ವರ್ಷ ಆರಂಭವಾದ ಅಕ್ಷಯ ಪದವಿ ಪೂರ್ವ ಕಾಲೇಜಿನಲ್ಲಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ವಿದ್ಯಾರ್ಥಿಗಳ ಭವಿಷ್ಯ ಹಾಗೂ ಸ್ಪರ್ಧಾತ್ಮಕ ಯುಗದ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ವಿವಿಧ ಸಂಯೋಜಿತ ಪಠ್ಯಕ್ರಮಗಳನ್ನು ಪರಿಚಯಿಸಲಾಗಿದೆ. ವಿಜ್ಞಾನ ವಿಭಾಗದಲ್ಲಿ ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ಮತ್ತು ಜೀವಶಾಸ್ತ್ರ(ಪಿಸಿಎಂಬಿ), ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ಮತ್ತು ಕಂಪ್ಯೂಟರ್ ಸೈನ್ಸ್(ಪಿಸಿಎಂಸಿ), ವಾಣಿಜ್ಯ ವಿಭಾಗದಲ್ಲಿ ಸಾಂಖ್ಯಿಕಶಾಸ್ತ್ರ, ಅರ್ಥಶಾಸ್ತ್ರ, ವ್ಯವಹಾರ ಅಧ್ಯಯನ ಮತ್ತು ಲೆಕ್ಕಶಾಸ್ತ್ರ(ಎಸ್.ಇ.ಬಿ.ಎ), ಅರ್ಥಶಾಸ್ತ್ರ, ವ್ಯವಹಾರ ಅಧ್ಯಯನ, ಲೆಕ್ಕಶಾಸ್ತ್ರ ಮತ್ತು ಕಂಪ್ಯೂಟರ್ ಸೈನ್ಸ್(ಇ.ಬಿ.ಎ.ಸಿ) ಪಠ್ಯಕ್ರಮಗಳು ವಿದ್ಯಾರ್ಥಿಗಳಿಗೆ ಲಭ್ಯವಿದೆ. ವಾಣಿಜ್ಯ ವಿಭಾಗದಲ್ಲಿ ಚಾರ್ಟರ್ಡ್ ಅಕೌಂಟೆನ್ಸಿ ಮೂಲಭೂತ ತರಬೇತಿಯೊಂದಿಗೆ ಪಠ್ಯಕ್ರಮ ಕಲಿಸಲಾಗುತ್ತಿದ್ದು, ವಿಜ್ಞಾನ ವಿಭಾಗದಲ್ಲಿ ನೀಟ್, ಸಿಇಟಿ ಹಾಗೂ ಜೆಇಇ ಪರೀಕ್ಷೆಗಳಿಗೆ ಸಂಯೋಜಿತ ತರಬೇತಿ ನೀಡಲಾಗುತ್ತಿದೆ.
ಅಕ್ಷಯ ಕೆರಿಯರ್ ಅಕಾಡೆಮಿ:
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಉದ್ಯೋಗಕ್ಕೆ ನೇರವಾಗಿ ನೆರವಾಗುವ ಕೌಶಲ್ಯಾಧಾರಿತ ತರಬೇತಿಗಳಿಗೆ ಹೆಚ್ಚಿನ ಮಹತ್ವ ದೊರೆಯುತ್ತಿದೆ. ಈ ನಿಟ್ಟಿನಲ್ಲಿ ಅಕ್ಷಯ ಕೆರಿಯರ್ ಅಕಾಡೆಮಿ ವಿದ್ಯಾರ್ಥಿಗಳಿಗೆ ಅಲ್ಪಾವಧಿಯಲ್ಲೇ ಉದ್ಯೋಗ ಪಡೆಯಲು ಸಹಾಯಕವಾಗುವ ವಿವಿಧ ಡಿಪ್ಲೊಮಾ ಕೋರ್ಸುಗಳನ್ನು ಪರಿಚಯಿಸಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೂ ಕೈಗೆಟುಕುವ ಶುಲ್ಕದಲ್ಲಿ ಗುಣಮಟ್ಟದ ವೃತ್ತಿಪರ ಶಿಕ್ಷಣ ನೀಡುವ ಉದ್ದೇಶದಿಂದ ಉದ್ಯೋಗಮುಖಿ ತರಬೇತಿಗೆ ಹೊಸ ಅವಕಾಶದೊಂದಿಗೆ ಈ ಅಕಾಡೆಮಿ ಕಾರ್ಯನಿರ್ವಹಿಸುತ್ತಿದೆ.
ಅಕ್ಷಯ ಕೆರಿಯರ್ ಅಕಾಡೆಮಿಯಲ್ಲಿ ಡಿಪ್ಲೊಮಾ ಇನ್ ಏವಿಯೇಷನ್ ಮತ್ತು ಹಾಸ್ಪಿಟಾಲಿಟಿ ಮ್ಯಾನೇಜ್ಮೆಂಟ್, ಡಿಪ್ಲೊಮಾ ಇನ್ ಲಾಜಿಸ್ಟಿಕ್ಸ್ ಮತ್ತು ಸಪ್ಲೈ ಚೈನ್ ಮ್ಯಾನೇಜ್ಮೆಂಟ್
ಕೋರ್ಸುಗಳು ಲಭ್ಯವಿದ್ದು, ವಿದ್ಯಾರ್ಥಿಗಳ ಆಸಕ್ತಿ ಹಾಗೂ ವೃತ್ತಿ ಗುರಿಗೆ ಅನುಗುಣವಾಗಿ ಆರು ತಿಂಗಳು ಮತ್ತು ಒಂದು ವರ್ಷದ ಅವಧಿಯ ತರಬೇತಿಯನ್ನು ನೀಡಲಾಗುತ್ತಿದೆ. ಈ ಕೋರ್ಸುಗಳಿಗೆ ಪಿಯುಸಿ, ಪದವಿ ಹಾಗೂ ಐಟಿಐ ಪೂರ್ಣಗೊಳಿಸಿದ ವಿದ್ಯಾರ್ಥಿಗಳು ಪ್ರವೇಶ ಪಡೆಯಬಹುದಾಗಿದೆ. ವಿಮಾನಯಾನ, ಹೋಟೆಲ್, ಲಾಜಿಸ್ಟಿಕ್ಸ್, ಗ್ರಾಹಕ ಸೇವೆ ಹಾಗೂ ಕಾರ್ಪೊರೇಟ್ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶಗಳನ್ನು ಗುರಿಯಾಗಿಸಿಕೊಂಡು ತರಬೇತಿ ನೀಡಲಾಗುತ್ತಿದ್ದು, ವಿದ್ಯಾರ್ಥಿಗಳಿಗೆ ಕ್ಯಾಂಪಸ್ ನೇಮಕಾತಿ ಮತ್ತು ಉದ್ಯೋಗ ಮಾರ್ಗದರ್ಶನಕ್ಕೂ ಆದ್ಯತೆ ನೀಡಲಾಗುತ್ತಿದೆ.
ಸ್ವಾವಲಂಭಿ ಬದುಕಿಗೆ ಅಕ್ಷಯ ಕಾಲೇಜು..
ನಮ್ಮ ಸಂಸ್ಥೆಯು ಸ್ಥಾಪನೆಯಾದಾಗಿನಿಂದ ಇವತ್ತಿನವರೆಗೂ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ ಹಾಗೂ ಸಂಸ್ಥೆಯ ಉಪನ್ಯಾಸಕ ವರ್ಗ ಹಾಗೂ ಆಡಳಿತ ಸಿಬ್ಬಂದಿ ನೀಡಿದ ಪ್ರೋತ್ಸಾಹಕ್ಕೆ ಚಿರಋಣಿ. ಸಂಸ್ಥೆಯಿಂದ ಬಡ ಹಾಗೂ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಶೈಕ್ಷಣಿಕ ಸಾಲ ಸೌಲಭ್ಯಕ್ಕೆ ನೆರವು ನೀಡಲಾಗುತ್ತಿದೆ. ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗೆ ಇಲ್ಲಿ ನಿರಂತರ ಪ್ರೋತ್ಸಾಹ ನೀಡಲಾಗುತ್ತಿದ್ದು ವಿದ್ಯಾರ್ಥಿಗಳು ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡು ವಿಶ್ವದಾಖಲೆ ಸಾಧನೆಯ ಮೂಲಕ ಸಂಸ್ಥೆಗೆ ಕೀರ್ತಿ ತಂದಿದ್ದಾರೆ. ಈ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಅನುಕೂಲತೆಗಾಗಿ ಅಕ್ಷಯ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಿದ್ದು ಸ್ವಾವಲಂಬಿಯಾಗಿ ಬದುಕಬಲ್ಲೆ ಎನ್ನುವ ವಾತಾವರಣ ಮೂಡಿಸುವುದೇ ನಮ್ಮ ಸಂಸ್ಥೆಯ ಮುಖ್ಯ ಉದ್ದೇಶವಾಗಿದೆ
-ಜಯಂತ್ ನಡುಬೈಲು, ಅಧ್ಯಕ್ಷರು, ಅಕ್ಷಯ ಕಾಲೇಜು

ಪ್ರಸ್ತುತ ಎಲ್ಲಾ ಕೋರ್ಸುಗಳಿಗೆ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದ್ದು, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಸಂಸ್ಥೆ ಕರೆ ನೀಡಿದೆ. ಶಿಕ್ಷಣದ ಜೊತೆಗೆ ಕೌಶಲ್ಯಾಭಿವೃದ್ಧಿ, ಉದ್ಯೋಗಾವಕಾಶ ಮತ್ತು ಜಾಗತಿಕ ಅನುಭವವನ್ನು ಒದಗಿಸುವ ಮೂಲಕ ಅಕ್ಷಯ ಸಂಸ್ಥೆ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಕಾರ್ಯದಲ್ಲಿ ಮುಂಚೂಣಿಯಲ್ಲಿದೆ. ಹೆಚ್ಚಿನ ಮಾಹಿತಿಗಾಗಿ 9141160704, 808381678, 7975719385, 9980987212 ಸಂಪರ್ಕಿಸಬಹುದಾಗಿದೆ.
- ವಿಶೇಷತೆಗಳು..
ಅನುಭವ ಸಂಪನ್ನ, ಉನ್ನತ ಅರ್ಹತೆ ಹೊಂದಿದ ಶಿಕ್ಷಕರಿಂದ ಬೋಧನೆ - ಖ್ಯಾತ ಸಂಸ್ಥೆಗಳ ಸಹಭಾಗಿತ್ವದಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ
- ಉಚಿತ ಏವಿಯೇಷನ್ ಮೂಲಭೂತ ತರಗತಿಗಳು
- ಸಾಫ್ಟ್ ಸ್ಕಿಲ್ಸ್ ತರಬೇತಿ
- ವ್ಯಕ್ತಿತ್ವ ವಿಕಾಸ ಕಾರ್ಯಕ್ರಮಗಳು
- ಇಂಗ್ಲಿಷ್ ಮಾತನಾಡುವ ತರಬೇತಿ
- ಕೈಗಾರಿಕಾ ಭೇಟಿ ಕಾರ್ಯಕ್ರಮಗಳು
- ಉಚಿತ ವಿಮಾನಯಾನ ಅನುಭವ
- ಪ್ರಾಯೋಗಿಕ ತರಬೇತಿಗೆ ವಿಶೇಷ ಒತ್ತು
- ಶಿಕ್ಷಣ ಸಾಲ ಸೌಲಭ್ಯ
- ಉದ್ಯೋಗಮುಖಿ ತರಬೇತಿ ವ್ಯವಸ್ಥೆ










