ಕಡಬ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಅಧ್ಯಕ್ಷರಾಗಿ ಇಂದುಶೇಖರ ಶೆಟ್ಟಿ, ಕಾರ್ಯದರ್ಶಿ ಪ್ರಕಾಶ್‌ ಕುಮಾರ್‌

0

ಕಡಬ: ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಕಡಬ ತಾಲೂಕಿನ ನೂತನ ಪದಾಧಿಕಾರಿಗಳ ಆಯ್ಕೆ ಮೇ 07 ರಂದು ಕಡಬದ ಶ್ರೀ ಜಯದುರ್ಗಾ ದೇವಸ್ಥಾನದ ಸಭಾಂಗಣದಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಕಡಬ ತಾಲೂಕಿನ ಅಧ್ಯಕರಾದ ಮಹೇಶ್‌ ಕೆ ಸವಣೂರುರವರ ಅಧ್ಯಕ್ಷತೆಯಲ್ಲಿ ಜರಗಿತು.


ನೂತನ ಅಧ್ಯಕ್ಷರಾಗಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಆಲಂಕಾರು ವಲಯದ ವಲಯಾಧ್ಯಕ್ಷ ಇಂದುಶೇಖರ ಶೆಟ್ಟಿ, ಕಾರ್ಯದರ್ಶಿಯಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಪ್ರಕಾಶ್‌ ಕುಮಾರ್‌ ರವರನ್ನು ಆಯ್ಕೆ ಮಾಡಲಾಯಿತು.


ನೆಲ್ಯಾಡಿ, ಸವಣೂರು, ಕಡಬ, ಬಿಳಿನೆಲೆ, ಗೋಳಿತೊಟ್ಟು, ಆಲಂಕಾರು ವಲಯದ 30 ಸದಸ್ಯರನ್ನು ತಾಲೂಕು ಸಮಿತಿಗೆ ಆಯ್ಕೆ ಮಾಡಲಾಯಿತು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ಪದ್ಮನಾಭ ಶೆಟ್ಟಿ, ಜಿಲ್ಲಾ ನಿರ್ದೇಶಕರಾದ ಬಾಬು ನಾಯ್ಕ ಎ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಪ್ರಾದೇಶಿಕ ಯೋಜನಾಧಿಕಾರಿ ಗಣೇಶ್‌ ಆಚಾರ್ಯ, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆಯ ತಾಲೂಕು ಉಪಾಧ್ಯಕ್ಷರಾದ ಸೀತಾರಾಮ ಗೌಡ ಪೊಸವೊಳಿಕೆ, ವಲಯಾಧ್ಯಕ್ಷರು, ಜಿಲ್ಲಾ ಸದಸ್ಯರು, ಮೇಲ್ವಿಚಾರಕರು, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. ಯೋಜನಾಧಿಕಾರಿ ಪ್ರಕಾಶ್‌ ಕುಮಾರ್‌ ಸ್ವಾಗತಿಸಿ, ರವಿಪ್ರಸಾದ್‌ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here