






ಪುತ್ತೂರು: ಪುತ್ತೂರು ಪರಿಸರದಲ್ಲಿ ಇತ್ತೀಚೆಗೆ ಹೆಚ್ಚುತ್ತಿರುವ ಅಪಘಾತಗಳ ಹಿನ್ನೆಲೆಯಲ್ಲಿ ಲೋಕಕಲ್ಯಾಣಾರ್ಥವಾಗಿ ಮೇ.12ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಮೃತ್ಯುಂಜಯ ಸೂಕ್ತ ಜಪ ನೆರವೇರಿತು.


ಶಾಸಕ ಅಶೋಕ್ ಕುಮಾರ್ ರೈ ಅವರ ಸಲಹೆಯಂತೆ ದೇವಸ್ಥಾನದ ಗೋಪುರದಲ್ಲಿ ವೈದಿಕರಿಂದ 1008 ಮೃತ್ಯುಂಜಯ ಸೂಕ್ತ ಜಪ ಪಠಿಸಲಾಯಿತು. ಆರಂಭದಲ್ಲಿ ರುದ್ರ ಪಾರಾಯಣ ನಡೆದು ಬಳಿಕ ಮೃತ್ಯುಂಜಯ ಸೂಕ್ತ ಪಠಿಸಲಾಯಿತು. ದೇವಳದ ಪ್ರಧಾನ ಅರ್ಚಕ ವೇ. ಮೂ. ವಸಂತ ಕೆದಿಲಾಯ ಮತ್ತು ಅರ್ಚಕ ವೇ. ಮೂ. ಜಯರಾಮ ಜೋಯಿಸರ ನೇತೃತ್ವದಲ್ಲಿ ಈ ಧಾರ್ಮಿಕ ಕಾರ್ಯಕ್ರಮ ಜರುಗಿತು. ಜಪದ ಪೂರ್ಣಾಹುತಿ ಸಂದರ್ಭ ಶಾಸಕ ಅಶೋಕ್ ಕುಮಾರ್ ರೈ ಅವರು ವೈದಿಕರೊಂದಿಗೆ ಕುಳಿತು ಭಾಗವಹಿಸಿದರು.



ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಸದಸ್ಯರಾದ ಮಹಾಬಲ ರೈ ವಳತ್ತಡ್ಕ, ದಿನೇಶ್ ಪಿ. ವಿ, ನಳಿನಿ ಪಿ. ಶೆಟ್ಟಿ, ಕೃಷ್ಣವೇಣಿ, ಸುಭಾಶ್ ರೈ ಬೆಳ್ಳಿಪ್ಪಾಡಿ, ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಧಾಕೃಷ್ಣ ನಾಕ್, ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿರಂಜನ ರೈ ಮಠಂತಬೆಟ್ಟು, ರತ್ನಾಕರ ನಾೖಕ್, ಸುದೇಶ್ ಚಿಕ್ಕಪುತ್ತೂರು, ಜಯಪ್ರಕಾಶ್ ಬದಿನಾರು, ಪೂರ್ಣೇಶ್, ರೈ ಎಸ್ಟೇಟ್ ಆ್ಯಂಡ್ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್‌ನ ಕಾರ್ಯಾಧ್ಯಕ್ಷ ಸುದೇಶ್ ಶೆಟ್ಟಿ, ವಿಕ್ರಂ ಶೆಟ್ಟಿ ಅಂತರ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.










