







ಪುತ್ತೂರು: ಪಡ್ನೂರು ಗ್ರಾಮದ ಕುಂಜಾರು ಮದಗ ಶ್ರೀ ಜನಾರ್ದನ ದೇವಸ್ಥಾನದಲ್ಲಿ ನಡೆಯುತ್ತಿರುವ ಜೀರ್ಣೋದ್ಧಾರ ಕಾರ್ಯದ ಅಂಗವಾಗಿ ಅಷ್ಟಮಂಗಲ ಪ್ರಶ್ನಾ ಚಿಂತನೆಯಲ್ಲಿ ದೈವಜ್ಞರು ಸೂಚಿಸಿರುವಂತೆ ನಾಗ ದೇವರು ಮತ್ತು ದೈವಗಳ ಪ್ರತಿಷ್ಠಾ ಕಾರ್ಯಕ್ರಮಗಳು ಮೇ.11ರಂದು ನೇರವೇರಿತು.



ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೇ೧೦ರಂದು ದೇವತಾ ಪ್ರಾರ್ಥನೆ, ಆಚಾರ್ಯವರಣ, ಸ್ವಸ್ತಿ ಪುಣ್ಯಾಹವಾಚನ, ಸ್ಥಳ ಶುದ್ಧಿ, ಪ್ರಾಸಾದ ಶುದ್ಧಿ, ರಕ್ಷೋಘ್ನ ಹೋಮ, ವಾಸ್ತುಹೋಮ, ವಾಸ್ತು ಪೂಜಾ ಬಲಿ, ಪ್ರಾಕಾರ ಬಲಿ, ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಿತು.



ಮೇ.11ರಂದು ಬೆಳಿಗ್ಗೆ ಮಹಾಗಣಪತಿ ಹೋಮ, ಕಲಶ ಪೂಜೆ, ಪ್ರತಿಷ್ಠಾ ಹೋಮ, ಅಶ್ಲೇಷಾ ಬಲಿ, ನಾಗದೇವರ ಪುನಃ ಪ್ರತಿಷ್ಠೆ, ದೈವಗಳ ಪುನಃ ಪ್ರತಿಷ್ಠೆ ಕಲಶಾಭಿಷೇಕ, ತಂಬಿಲ ಸೇವೆ, ಮಂಗಳಾರತಿ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು.
ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹಾರಕರೆ ವೆಂಕಟ್ರಮಣ ಭಟ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ವಸಂತ ಸಪಲ್ಯ ಕುಂಜಾರು, ವ್ಯವಸ್ಥಾಪನಾ ಸಮಿತಿ ಸದಸ್ಯರು, ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳು, ಸದಸ್ಯರು, ಬೈಲುವಾರು ಸಮಿತಿಯವರು ಹಾಗೂ ಭಕ್ತಾದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.










