ಬೆಟ್ಟಂಪಾಡಿ: ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಕಲಾಸಂಘದ ವಾರ್ಷಿಕೋತ್ಸವದ ಆಮಂತ್ರಣ ಪತ್ರ ಬಿಡುಗಡೆ

0

ಬೆಟ್ಟಂಪಾಡಿ: ಶ್ರೀ ಕ್ಷೇತ್ರ ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವರ ಪತ್ತನಾಜೆ ಜಾತ್ರೆಯ ಶುಭ ಸಂದರ್ಭದಲ್ಲಿ ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ಯಕ್ಷಗಾನ ಕಲಾಸಂಘದ ವಾರ್ಷಿಕೋತ್ಸವ- ಸನ್ಮಾನ ಸಮಾರಂಭ ಹಾಗೂ ಯಕ್ಷಗಾನ ಬಯಲಾಟವು ಮೇ.25ರಂದು ಶ್ರೀ ಕ್ಷೇತ್ರ ಬೆಟ್ಟಂಪಾಡಿಯಲ್ಲಿ ನಡೆಯಲಿದ್ದು, ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆಯು ಮೇ.12 ರಂದು ಶ್ರೀ ಕ್ಷೇತ್ರದ ವಠಾರದಲ್ಲಿ ನಡೆಯಿತು.


ದೇವಾಲಯದ ಅರ್ಚಕ ನಾರಾಯಣ ಭಟ್‌ ರವರು ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಪ್ರಾರ್ಥಿಸಿ, ಆಮಂತ್ರಣ ಪತ್ರ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಸಂಘದ ಅಧ್ಯಕ್ಷ ಐ. ಗೋಪಾಲಕೃಷ್ಣ ರಾವ್‌, ಕೋಶಾಧಿಕಾರಿ ಶ್ಯಾಂಪ್ರಸಾದ್‌ ಮಜಲುಗುಡ್ಡೆ, ಸದಸ್ಯರಾದ ಕೃಷ್ಣಪ್ರಸಾದ್‌ ಬೆಟ್ಟಂಪಾಡಿ, ಹರಿಪ್ರಸಾದ್‌ ಮಿತ್ತಡ್ಕ, ಪ್ರಸನ್ನಕುಮಾರ್‌ ಭಟ್‌, ವಿನಯ ತಲೆಪ್ಪಾಡಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here