ಆಲಂಕಾರು ಗ್ರಾ.ಪಂ ವತಿಯಿಂದ ಪೇಟೆಯಲ್ಲಿ ಸ್ವಚ್ಛತಾ ಕಾರ್ಯ

0

ಆಲಂಕಾರು: ಆಲಂಕಾರು ಗ್ರಾಮ ಪಂಚಾಯತ್ ವತಿಯಿಂದ ಆಲಂಕಾರು ಪೇಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು.ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಸುಜಾತ ಕೆ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡು, ವರ್ತಕರು ಮತ್ತು ಅಂಗಡಿ ಮಾಲಿಕರಿಗೆ ಆಲಂಕಾರು ಪೇಟೆಯ ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಸೂಚನೆ ನೀಡಿದರು. ಸ್ವಚ್ಛತೆ ಕಾಪಾಡಿಕೊಳ್ಳದಿದ್ದಲ್ಲಿ ಗ್ರಾ.ಪಂ ವತಿಯಿಂದ ದಂಡ ವಿಧಿಸಲಾಗುವುದು ಎಂದು ಎಚ್ಚರಿಸಿದರು.ಸ್ವಚ್ಛತಾ ಕಾರ್ಯಕ್ರಮದಲ್ಲಿ ಗ್ರಾ.ಪಂ ಸಿಬ್ಬಂದಿಗಳಾದ ಹೇಮಾವತಿ, ಭವ್ಯ, ವಸಂತ, ಮೋನಪ್ಪ, ಗ್ರಂಥಾಲಯ ಮೇಲ್ವಿಚಾರಕಿ ಕಮಲ, ಸಂಜೀವಿನಿ ಒಕ್ಕೂಟದ ಜಯಶ್ರೀ, ಪುಷ್ಪಾ ಪಾಲ್ಗೊಂಡರು.

LEAVE A REPLY

Please enter your comment!
Please enter your name here