ಉಪ್ಪಿನಂಗಡಿ: ಸಾರ್ವಜನಿಕ ಸ್ಥಳದಲ್ಲಿ ತ್ಯಾಜ್ಯ ಎಸೆತ – ಪೊಲೀಸ್ ದೂರು

0

ಉಪ್ಪಿನಂಗಡಿ: ಇಲ್ಲಿನ 34 ನೆಕ್ಕಿಲಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ತ್ಯಾಜ್ಯ ಎಸೆದವರ ವಿರುದ್ಧ ಗ್ರಾ.ಪಂ. ಪಿಡಿಒ ಅವರು ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.


34 ನೆಕ್ಕಿಲಾಡಿ ಗ್ರಾ.ಪಂ. ವತಿಯಿಂದ ಸ್ವಚ್ಛ ಶನಿವಾರ ಭಾಗವಾಗಿ ತ್ಯಾಜ್ಯ ಸಂಗ್ರಹ ಕಾರ್ಯ ನಡೆದಿತ್ತು. ಈ ಸಂದರ್ಭ ನೆಕ್ಕಿಲಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಳಿ ರಸ್ತೆ ಬದಿಯಲ್ಲಿ ಕಸದ ಚೀಲವೊಂದು ಪತ್ತೆಯಾಗಿತ್ತು. ಇದನ್ನು ಪರಿಶೀಲಿಸಿದಾಗ ಇದರಲ್ಲಿ ಬಟ್ಟೆ ಮಳಿಗೆಯೊಂದರ ಬಿಲ್ ಇದ್ದು, ಅದರಲ್ಲಿ ಗ್ರಾಹಕರ ಮೊಬೈಲ್ ನಂಬರ್ ಕೂಡಾ ಇತ್ತು. ಇದರ ಆಧಾರದ ಮೇಲೆ ಗ್ರಾ.ಪಂ. ಪಿಡಿಒ ರವಿಚಂದ್ರ ಯು. ಅವರು ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದರು. ಇವರ ದೂರನ್ನು ಪೊಲೀಸ್ ಠಾಣೆಯಲ್ಲಿ ಮುಂದಿನ ಕ್ರಮಕ್ಕಾಗಿ ನಂ. 149/ಪಿಟಿಎನ್/ಯುಪಿಎಸ್/2026ರಂತೆ ಸ್ವೀಕರಿಸಲಾಗಿದೆ.

LEAVE A REPLY

Please enter your comment!
Please enter your name here