






ಪುತ್ತೂರು: ಮಾಣಿ – ಮೈಸೂರು ರಾಜ್ಯ ಹೆದ್ದಾರಿಯ ಮಿತ್ತೂರು ಸಮೀಪದ ಕೂವೆತ್ತಿಲ ಎಂಬಲ್ಲಿ ಮಹಿಂದ್ರಾ ಪಿಕಪ್ ವಾಹನ ಮತ್ತು ಆಕ್ಟಿವಾ ದ್ವಿಚಕ್ರ ವಾಹನದ ನಡುವೆ ನಡೆದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ.






ಸೋಫಾ ಹಾಗೂ ವಾಹನಗಳ ಕುಶನ್ ಕೆಲಸ ಮಾಡಿಕೊಂಡಿದ್ದ ಕಬಕ ನಿವಾಸಿ ಸಲೀಂ (52 ವ.) ಗಾಯಗೊಂಡವರಾಗಿದ್ದಾರೆ.
ಸಲೀಂ ರವರು ಮಿತ್ತೂರು ದಾರುಲ್ ಇಸ್ಲಾಂ ಶಿಕ್ಷಣ ಸಂಸ್ಥೆಯ ವಾಹನದ ಕೆಲಸವನ್ನು ನೋಡಿ ಹಿಂದಿರುಗುತ್ತಿದ್ದ ಸಂದರ್ಭ ಕೂವೆತ್ತಿಲದಲ್ಲಿ ಈ ಅಪಘಾತ ಸಂಭವಿಸಿದೆ. ಕಬಕ ಕಡೆಯಿಂದ ಮಿತ್ತೂರು ಕಡೆಗೆ ತೆರಳುತ್ತಿದ್ದ ಮಹಿಂದ್ರಾ ಪಿಕಪ್ ವಾಹನ ಸಲೀಂ ರವರು ಸಂಚರಿಸುತ್ತಿದ್ದ ಆಕ್ಟಿವಾ ವಾಹನಕ್ಕೆ ಡಿಕ್ಕಿಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡ ಸಲೀಂ ರವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸ್ಕೂಟರ್‌ಗೆ ಡಿಕ್ಕಿ ಹೊಡೆದ ಬಳಿಕ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ರಸ್ತೆ ಬದಿಗೆ ಪಲ್ಟಿಯಾಗಿದೆ.










