ಎಂ.ವಾಸುದೇವ ಹೊಳ್ಳ ಅವರಿಗೆ ಎಡನೀರು ಕೇಶವಾನಂದ ಭಾರತಿ ಸ್ವಾಮೀಜಿ ಸ್ಮರಣಾರ್ಥ ದತ್ತಿ ನಿಧಿ ಪ್ರಶಸ್ತಿ ಪ್ರದಾನ

0

ವರದಿ: ಉಮಾಪ್ರಸಾದ್ ರೈ ನಡುಬೈಲು


ಪುತ್ತೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕೋಶಾಧಿಕಾರಿಯೂ ಆಗಿರುವ ಹಿರಿಯ ಪತ್ರಕರ್ತರಾದ ಮೂಲತಃ ಪುತ್ತೂರಿನ ಕುರಿಯ ಮಾಪಾಲ ನಿವಾಸಿಯಾಗಿದ್ದು, ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿರುವ ಎಂ.ವಾಸುದೇವ ಹೊಳ್ಳ ಅವರಿಗೆ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಸಂಘದ ವತಿಯಿಂದ ಬ್ರಹ್ಮೈಕ್ಯ ಎಡನೀರು ಕೇಶವಾನಂದ ಭಾರತಿ ಸ್ವಾಮೀಜಿ ಸ್ಮರಣಾರ್ಥ ದತ್ತಿ ನಿಧಿ ಪ್ರಶಸ್ತಿಯನ್ನು ಮೇ 16 ರಂದು ಪ್ರಧಾನ ಮಾಡಲಾಯಿತು.

ಕಾಸರಗೋಡಿನ ಕುಡಾಲ್ ಸುಬ್ಬಯ್ಯ ಕಟ್ಟೆ ಅನುದಾನಿತ ಕಿ.ಪ್ರಾ.ಶಾಲೆಯಲ್ಲಿ ನಡೆದ ಸಮಾರಂಭದಲ್ಲಿ ವಾಸುದೇವ ಹೊಳ್ಳ ಅವರಿಗೆ ದತ್ತಿ ನಿಧಿ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು.

ಕಾಸರಗೋಡು ಜಿಲ್ಲಾ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ,ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಸರಕಾರ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಬೆಂಗಳೂರು ಇದರ ವತಿಯಿಂದ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕರ್ನಾಟಕ ಕನಿಷ್ಟ ವೇತನ ಸಲಹಾ ಮಂಡಳಿಯ ಅಧ್ಯಕ್ಷ ಟಿ.ಎಂ.ಶಹೀದ್ ದತ್ತಿ ನಿಧಿ ಪ್ರಶಸ್ತಿ ಪ್ರದಾನ ಮಾಡಿದರು.


ಮಂಜೇಶ್ವರದ ಬ್ಲಾಕ್ ಪಂಚಾಯತ್ ಅಧ್ಯಕ್ಷ ಸೈಯದ್ ಯು.ಕೆ ಸೈಪುಲ್ಲಾ ಉಪಸ್ಥಿತರಿದ್ದರು. ಸ್ವಾಗತ ಸಮಿತಿ ಅಧ್ಯಕ್ಷ ಜೆ.ಎಸ್. ಸೋಮಶೇಖರ್, ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೋಮಣ್ಣ ಬೇವಿನ ಮರದ ಉದ್ಘಾಟಿಸಿದರು. ಪೈವಳಿಕೆ ಗ್ರಾಮ ಪಂಚಾಯತ್ ಸದಸ್ಯೆ ಶಶಿಕಲಾ ರೈ, ಕಾ.ಸ.ಪ ಕೇರಳ ಘಟಕದ ಅಧ್ಯಕ್ಷ ಡಾ. ಜಯಪ್ರಕಾಶ್ ನಾರಾಯಣ್ ವೇದಿಕೆಯಲ್ಲಿದ್ದರು. ಕಾಸರಗೋಡು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಎ.ಆರ್.ಸುಬ್ಬಯ್ಯ ಕಟ್ಟೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಚಂದನ ವಾಹಿನಿಯ ಬೆಂಗಳೂರಿನ ಸೌಮ್ಯ ಗೌಡ ನಿರೂಪಣೆ ಮಾಡಿದರು.

LEAVE A REPLY

Please enter your comment!
Please enter your name here