ವಿಕಲಚೇತನರ ಪಿಂಚಣಿ ವಿಳಂಬ; ಶಾಸಕ ಅಶೋಕ್ ರೈಗೆ ಮನವಿ

0


ಪುತ್ತೂರು: ರಾಜ್ಯದಾದ್ಯಂತ ವಿಕಲ ಚೇತನರು, ಹಾಸಿಗೆ ಹಿಡಿದ ವಿಕಲ ಚೇತನರು, ಎಂಡೊ ಪೀಡಿತ ವಿಕಲ ಚೇತನರು ಹಾಗೂ ಹಿರಿಯ ನಾಗರಿಕರಿಗೆ ಕಳೆದ ಎರಡು ತಿಂಗಳಿಂದ ಮಾಸಾಶನ ಪಿಂಚಣಿ ಜಮೆಯಾಗದೇ ಇರುವ ಹಿನ್ನೆಲೆಯಲ್ಲಿ ಜೀವನ ನಿರ್ವಹಣೆಗೆ ತೀವ್ರ ತೊಂದರೆ ಉಂಟಾಗಿದೆ ಎಂದು ಆರೋಪಿಸಿ ಪುತ್ತೂರಿನಲ್ಲಿ ಮನವಿ ಸಲ್ಲಿಸಲಾಯಿತು.


ಪುತ್ತೂರು ತಾಲ್ಲೂಕು ಪಂಚಾಯತ್ ವಿಕಲ ಚೇತನರ ಸೇವಾ ಕೇಂದ್ರದ ವತಿಯಿಂದ ಸೋಮವಾರ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್‌ ಕುಮಾರ್‌ ರೈ ಅವರನ್ನು ಅವರ ಕಚೇರಿಯಲ್ಲಿ ಭೇಟಿ ಮಾಡಿ ಸಮಸ್ಯೆ ಕುರಿತು ಮನವಿ ಸಲ್ಲಿಸಲಾಯಿತು.


ಮನವಿಗೆ ತಕ್ಷಣ ಸ್ಪಂದಿಸಿದ ಶಾಸಕ ಅಶೋಕ್ ರೈ, ಈ ಸಂಬಂಧ ಬೆಂಗಳೂರಿನ ಸಾಮಾಜಿಕ ಭದ್ರತಾ ಪಿಂಚಣಿ ನಿರ್ದೇಶನಾಲಯದ ನಿರ್ದೇಶಕರಿಗೆ ಪತ್ರ ಬರೆದು, ಎರಡು ತಿಂಗಳಿಂದ ಬಾಕಿ ಉಳಿದಿರುವ ಪಿಂಚಣಿ ಸಮಸ್ಯೆಯನ್ನು ಶೀಘ್ರ ಪರಿಹರಿಸುವಂತೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.


ಈ ಸಂದರ್ಭದಲ್ಲಿ ಪುತ್ತೂರು ತಾಲ್ಲೂಕು ಪಂಚಾಯತ್ ವಿಕಲ ಚೇತನರ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತ ನವೀನ್ ಕುಮಾರ್, ಪುತ್ತೂರು ನಗರಸಭೆಯ ನಗರ ಪುನರ್ವಸತಿ ಕಾರ್ಯಕರ್ತ ಭರತ್ ಕೆ., ಕಡಬ ತಾಲೂಕಿನ ಬೆಳಂದೂರು ವಿಕಲ ಚೇತನರ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆ ಪ್ರಶಾಂತಿ ಆನಂದ ಗೌಡ, ಅಲಂಕಾರು ಗ್ರಾಮ ಪಂಚಾಯತ್‌ನ ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಮೋನಪ್ಪ ಬಿ. ಸೇರಿದಂತೆ ವಿಕಲ ಚೇತನರು ಹಾಗೂ ಎಂಡೊ ಪೀಡಿತ ವಿಕಲ ಚೇತನರ ಆರೈಕೆದಾರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here