







ಆಲಂಕಾರು: ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಹಳೆನೇರೆಂಕಿ ನೂತನ ಶಾಖಾ ಕಛೇರಿ ಲೋಕಾರ್ಪಣೆ ಮೇ.21ರಂದು ಗುರುವಾರ ಪೂರ್ವಾಹ್ನ ಗಂಟೆ 9:30ಕ್ಕೆ ಲೋಕಾರ್ಪಣೆಗೊಳ್ಳಲಿದೆ.



ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಮಂಗಳೂರು ಇದರ ಅಧ್ಯಕ್ಷರು, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಇದರ ನಿರ್ದೇಶಕರಾದ ಶಶಿಕುಮಾರ್ ಬಾಲ್ಯೋಟ್ಟು ದೀಪ ಪ್ರಜ್ವಲನೆಗೊಳಿಸಿದ ನಂತರ ಲೋಕಾರ್ಪಣೆಗೊಳ್ಳಲಿದೆ. ಈ ಕಾರ್ಯಕ್ರಮದಲ್ಲಿ ಎಲ್ಲಾರು ಪಾಲ್ಗೊಳ್ಳುವಂತೆ ಸಂಘದ ಅಧ್ಯಕ್ಷ ರಮೇಶ ಭಟ್ಟ ಉಪ್ಪಂಗಳ, ದಯಾನಂದ ರೈ ಮನವಳಿಕೆಗುತ್ತು ಉಪಾಧ್ಯಕ್ಷರು, ಮನೋಹರ ಪ್ರಕಾಶ್ ಡಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಮತ್ತು ಆಡಳಿತ ಮಂಡಳಿ ನಿರ್ದೇಶಕರು ಹಾಗೂ ಸಿಬ್ಬಂದಿ ವರ್ಗ ಆಲಂಕಾರು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘ ನಿಯಮಿತ ಆಲಂಕಾರು ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












