ವಿಟ್ಲ: ಅಕ್ರಮ ಮರಳು ಸಾಗಾಟ ಪತ್ತೆ – ವಾಹನ ಪೊಲೀಸ್ ವಶಕ್ಕೆ

0

ವಿಟ್ಲ: ಹೊಳೆಯಿಂದ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನವೊಂದನ್ನು ವಿಟ್ಲ ಠಾಣಾ ಪೊಲೀಸರು ವಶಪಡಿಸಿಕೊಂಡಿರುವ ಘಟನೆ ಬಂಟ್ವಾಳ ತಾಲೂಕಿನ ಬೈರಿಕಟ್ಟೆ ಎಂಬಲ್ಲಿ ನಡೆದಿದೆ.

ವಾಹನದ ಚಾಲಕ, ಕೊಳ್ನಾಡು ನಿವಾಸಿ ರೆನೋಲ್ ಮೆಲ್ಲೋಯ್ ಡಿಸೋಜ (31 ವ.) ರವರ ವಿರುದ್ದ ಪ್ರಕರಣ ದಾಖಲಿಸಲಾಗಿದೆ.

ಮೇ. 18ರಂದು ರಾತ್ರಿ ವಿಟ್ಲ ಸಮೀಪದ ಕುಡ್ತಮುಗೇರು ಹೊಳೆಯಿಂದ ಪಿಕಪ್ ವಾಹನದಲ್ಲಿ ಅಕ್ರಮವಾಗಿ ಮರಳು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ವಿಟ್ಲ ಪೊಲೀಸ್‌ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಉಪನಿರೀಕ್ಷಕರಾದ ರಾಮಕೃಷ್ಣರವರ ನೇತೃತ್ವದ ಪೊಲೀಸರ ತಂಡ ಕನ್ಯಾನ ಗ್ರಾಮದ ಬೈರಿಕಟ್ಟೆ ಎಂಬಲ್ಲಿ ವಾಹನವನ್ನು ತಡೆದು ಪರಿಶೀಲನೆ ನಡೆಸಿದಾಗ ಅಕ್ರಮ ಮರಳು ಸಾಗಾಟ ಮಾಡುತ್ತಿರುವುದು ಕಂಡುಬಂದಿತ್ತು.

ವಿಚಾರಣೆ ವೇಳೆ ಯಾವುದೇ ಪರವಾನಗಿ ಇಲ್ಲದೆ ಮರಳು ಸಾಗಾಟ ಮಾಡುತ್ತಿರುವುದು ದೃಢಪಟ್ಟಿತ್ತು. ಕೂಡಲೇ ಪೊಲೀಸರು ಮರಳು ಸಹಿತ ಪಿಕ್‌ಅಪ್ ವಾಹನವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here