






ಪುತ್ತೂರು ; ಮಂಗಳೂರು ವಿಶ್ವವಿದ್ಯಾನಿಲಯ ಸ್ನಾತಕೋತ್ತರ ಸಮಾಜ ಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗ ವತಿಯಿಂದ ಪುತ್ತೂರು ಮಾಲೆತ್ತೂಡಿ ದ.ಕ.ಜಿ.ಪಂ. ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮೇ.21ರಂದು ಸಂಜೆ 5.30ಕ್ಕೆ “ಸಮಾಜ ಕಾರ್ಯ ಗ್ರಾಮೀಣ ಅಧ್ಯಯನ ಶಿಬಿರ-2026″ ಇದರ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.
ಉದ್ಘಾಟಕರಾಗಿ ಶಾಸಕ ಅಶೋಕ್ ಕುಮಾರ್ ರೈ, ಅಧ್ಯಕ್ಷರಾಗಿ ಮಂಗಳೂರು ವಿಶ್ವವಿದ್ಯಾನಿಲಯ ಸಮಾಜ ಕಾರ್ಯ ವಿಭಾಗದ ಅಧ್ಯಕ್ಷ ಡಾ| ಪೌಲ್. ಜಿ. ಅಕ್ವಿನಸ್ ಭಾಗವಹಿಸಲಿದ್ದಾರೆ.
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮಿತಿ ಅಧ್ಯಕ್ಷ ಈಶ್ವರ್ ಭಟ್ ಪಂಜಿಗುಡ್ಡೆ ಘನ ಉಪಸ್ಥಿತರಿರಲಿದ್ದಾರೆ.ಮುಖ್ಯ ಅತಿಥಿಗಳಾಗಿ ಕೊಳ್ತಿಗೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಅಕ್ಕಮ್ಮ, ಮಾಲೆತ್ತೂಡಿ ದ.ಕ.ಜಿ.ಪಂ. ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ತಿಮ್ಮಪ್ಪ, ಮಾಲೆತ್ತೂಡಿ ದ.ಕ.ಜಿ.ಪಂ. ಕಿರಿಯ ಪ್ರಾಥಮಿಕ ಶಾಲೆಯ SDMC ಅಧ್ಯಕ್ಷ ಜಯ ಪ್ರಕಾಶ್ ಕೊಳ್ತಿಗೆ, ಮಂ.ವಿ.ವಿ. ಸಮಾಜ ಕಾರ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ, ಗ್ರಾಮೀಣ ಸಹಭಾಗಿತ್ವ ಸಮೀಕ್ಷೆಯ ಸಂಪನ್ಮೂಲ ವ್ಯಕ್ತಿ ಡಾ। ಯಶಸ್ವಿನಿ ಬಟ್ಟಂಗಾಯ, ಮುಡಿಪು ಜನ ಶಿಕ್ಷಣ ಟ್ರಸ್ಟ್ ಯೋಜನ ಸಂಯೋಜಕ ಚೇತನ್ ಪಡ್ಡು, ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕರಾದ ಡಾ.ಯು.ಪಿ. ಶಿವಾನಂದ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮಂ.ವಿ.ವಿ. ಸಮಾಜ ಕಾರ್ಯ ವಿಭಾಗದ ಉಪನ್ಯಾಸಕ, ಶಿಬಿರದ ನಿರ್ದೇಶಕ ಡಾ. ಶರತ್ ಕುಮಾರ್ ಶಿಬಿರದ ಉದ್ದೇಶ ಮತ್ತು ಪ್ರಸ್ತಾವನೆಗೈಯ್ಯಲಿದ್ದಾರೆ. ಸಮಾಜ ಕಾರ್ಯ ವಿಭಾಗದ ಉಪನ್ಯಾಸಕ, ಶಿಬಿರದ ನಿರ್ದೇಶಕ ಮಧುಕರ್ ವಂದಿಸಲಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.















