ಪೋಕ್ಸೋ ಪ್ರಕರಣದ ಆರೋಪಿಗೆ ಜಾಮೀನು ಮಂಜೂರು

0

ಪುತ್ತೂರು: ಪೋಕ್ಸೋ ಪ್ರಕರಣದಲ್ಲಿ ಬಂಽತನಾಗಿದ್ದ ಜಾರ್ಖಂಡ್ ಮೂಲದ ರೇ ಮುಂಡ ಎಂಬಾತನಿಗೆ ಪುತ್ತೂರು ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಽಶರಾದ ಸರಿತಾ ಡಿ. ಅವರು ಜಾಮೀನು ಮಂಜೂರು ಮಾಡಿದ್ದಾರೆ.


ಜಾರ್ಖಂಡ್ ಮೂಲದ ರೇ ಮುಂಡ ತನ್ನ ಊರಿನವಳೇ ಆದ ಬಾಲಕಿಯನ್ನು ಐವರ್ನಾಡು, ಪಾಲೇಪ್ಪಾಡಿ ಎಂಬಲ್ಲಿಗೆ ಕರೆದುಕೊಂಡು ಹೋಗಿ ಲೈಂಗಿಕವಾಗಿ ಬಳಸಿಕೊಂಡಿದ್ದ. ನಂತರ ವಿಷಯ ತಿಳಿದು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯ ಅಡಿಯಲ್ಲಿ ದೂರು ದಾಖಲಾಗಿದ್ದು, ಆರೋಪಿಯನ್ನು ಫೆ.13ರಂದು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿ ನ್ಯಾಯಾಗ ಬಂಧನದಲ್ಲಿದ್ದ. ಆರೋಪಿ ರೇ ಮುಂಡ ಕಜೆ ಲಾ ಚೇಂಬರ್‌ನ ಮಹೇಶ್ ಕಜೆರವರ ಮುಖಾಂತರ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ವಾದ-ವಿವಾದ ಆಲಿಸಿದ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಸರಿತಾ ಡಿ.ಅವರು ಮೇ.19ರಂದು ಆರೋಪಿಗೆ ಷರತ್ತುಬದ್ದ ಜಾಮೀನು ಮಂಜೂರು ಮಾಡಿ ಆದೇಶಿಸಿದ್ದಾರೆ. ಆರೋಪಿ ಪರ ವಕೀಲ ಮಹೇಶ್ ಕಜೆ ಅವರು ವಾದಿಸಿದ್ದರು.

LEAVE A REPLY

Please enter your comment!
Please enter your name here