






ಕಡಬ:ರಾಜ್ಯದಲ್ಲಿ ಹೆಚ್ಚುತ್ತಿರುವ ಅಕ್ರಮ ಗೋ ಸಾಗಣೆ, ಗೋಹತ್ಯೆ ಹಾಗೂ ಜಾನುವಾರುಗಳ ಮೇಲಿನ ಕ್ರೌರ್ಯ ತಡೆಯಲು ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ವಿಶ್ವ ಹಿಂದು ಪರಿಷತ್ ಕಡಬ ಪ್ರಖಂಡದ ವತಿಯಿಂದ ಕಡಬ ಪೊಲೀಸ್ ಠಾಣೆಗೆ ಗುರುವಾರ ಮನವಿ ಸಲ್ಲಿಸಲಾಯಿತು.


ವಿಶ್ವ ಹಿಂದು ಪರಿಷತ್ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಕಡಬ ಪೊಲೀಸ್ ಠಾಣೆಗೆ ಭೇಟಿ ನೀಡಿ ಠಾಣಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ರಾಜ್ಯದ ವಿವಿಧ ಭಾಗಗಳಲ್ಲಿ ಅಕ್ರಮವಾಗಿ ಜಾನುವಾರು ಸಾಗಣೆ, ಗೋಹತ್ಯೆ ಹಾಗೂ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿದ್ದು, ಇದರಿಂದ ಹಿಂದೂ ಸಮಾಜದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗುತ್ತಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.



ಜಾನುವಾರುಗಳನ್ನು ವಾಹನಗಳಲ್ಲಿ ಅಮಾನವೀಯವಾಗಿ ತುಂಬಿ ಸಾಗಣೆ ಮಾಡಲಾಗುತ್ತಿದ್ದು, ಆಹಾರ ಹಾಗೂ ನೀರಿನ ವ್ಯವಸ್ಥೆಯಿಲ್ಲದೆ ಕ್ರೂರವಾಗಿ ವರ್ತಿಸಲಾಗುತ್ತಿದೆ. ಇಂತಹ ಪ್ರಕರಣಗಳ ವಿರುದ್ಧ ಪೊಲೀಸ್ ಇಲಾಖೆ ತಕ್ಷಣ ಕ್ರಮ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಲಾಗಿದೆ.
ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯಿದೆ–2020, ಪ್ರಾಣಿಗಳ ಮೇಲಿನ ಕ್ರೂರತೆ ತಡೆ ಕಾಯಿದೆ–1960, ಕೇಂದ್ರ ಮೋಟಾರ್ ವಾಹನ ಕಾಯಿದೆ ಹಾಗೂ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಕಾಯಿದೆ (FSSAI) ಸೇರಿದಂತೆ ಸಂಬಂಧಿತ ಕಾನೂನುಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಈ ಸಂದರ್ಭದಲ್ಲಿ ವಿಶ್ವ ಹಿಂದು ಪರಿಷತ್‌ನ ಶಿವರಾಮ ರೈ, ಸತ್ಯ ನಾರಾಯಣ ಹೆಗ್ಡೆ ಉಮೇಶ್ ರೈ,ಪ್ರಮೀಳಾ ಲೋಕೇಶ್, ಉಮೇಶ್ ಬಲ್ಯ, ಅಶ್ವಿತ್ ಕಂಡಿಗ ಮತ್ತಿತರರು ಉಪಸ್ಥಿತರಿದ್ದರು.










