







ಪುತ್ತೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ದ.ಕ ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಧರಣಿ ಸಿ.ಬಿ.ರವರು ನೇಮಕಗೊಂಡಿದ್ದಾರೆ.


ರಾಜ್ಯ ಹಾಗೂ ರಾಷ್ಟ್ರೀಯ ಕಾಂಗ್ರೆಸ್ ವರಿಷ್ಠರ ನಿರ್ದೇಶನದ ಮೇರೆಗೆ ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಉಷಾ ಅಂಚನ್‌ರವರು ನೇಮಕ ಮಾಡಿ ಆದೇಶಿಸಿದ್ದಾರೆ. ಕೆಯ್ಯೂರು ಗ್ರಾಮದ ಪಕೀರ ಎಮ್.ರವರ ಪತ್ನಿಯಾದ ಧರಣಿ ಸಿ.ಬಿ.ರವರು ಕೆಯ್ಯೂರು ಗ್ರಾಮೀಣ ಕಾಂಗ್ರೆಸ್ ಬೂತ್ ಅಧ್ಯಕ್ಷರಾಗಿ, ಮಹಿಳಾ ಕಾಂಗ್ರೆಸ್ ಘಟಕದ ಕಾರ್ಯದರ್ಶಿಯಾಗಿ, ಪುತ್ತೂರು ಬ್ಲಾಕ್ ಪರಿಶಿಷ್ಟ ಜಾತಿ ಘಟಕದ ಉಪಾಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.













