ಮೇ.23: ಪಾಲಿಂಜೆ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಾರ್ಷಿಕ ಪ್ರತಿಷ್ಠಾ ಮಹೋತ್ಸವ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ದುರ್ಗಾಪೂಜೆ, ರಂಗಪೂಜೆ, ಭಜನಾ ಕಾರ್ಯಕ್ರಮ

0

ಪುತ್ತೂರು: ಕುರಿಯ ಗ್ರಾಮದ ಅಮ್ಮುಂಜ ಪಾಲಿಂಜೆ ಶ್ರೀ ಮಹಾ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಾರ್ಷಿಕ ಪ್ರತಿಷ್ಠಾ ಮಹೋತ್ಸವ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ದುರ್ಗಾಪೂಜೆ, ರಂಗಪೂಜೆ ಹಾಗೂ ಭಜನಾ ಕಾರ್ಯಕ್ರಮ ಮೇ.23ರಂದು ನೆರವೇರಲಿದೆ.


ಶ್ರೀ ಕ್ಷೇತ್ರದಲ್ಲಿ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರಗಲಿರುವುದು. ಬೆಳಿಗ್ಗೆ ಗಣಪತಿ ಹವನ, ನಾಗತಂಬಿಲ, ದೈವಗಳಿಗೆ ತಂಬಿಲ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, ದೇವರಿಗೆ ಕಲಶಾಭಿಷೇಕ ನಡೆಯಲಿರುವುದು. ಶ್ರೀ ಮಹಾವಿಷ್ಣುಮೂರ್ತಿ ಮಹಿಳಾ ಭಜನಾ ಮಂಡಳಿ ಪಾಲಿಂಜೆ ಇವರಿಂದ ಭಜನಾ ಕಾರ್ಯಕ್ರಮ ನೆರವೇರಲಿದೆ. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ಸಾಯಂಕಾಲ ಕುಣಿತ ಭಜನಾ ಕಾರ್ಯಕ್ರಮ(ಶ್ರೀ ಮಹಮ್ಮಾಯಿ ಕುಣಿತ ಭಜನಾ ಮಂಡಳಿ ಮಾಲೆತ್ತೋಡಿ ಕೆಯ್ಯೂರು ಹಾಗೂ ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಉದಯಗಿರಿ, ಮುಂಡೂರು) ಇವರಿಂದ ನಡೆಯಲಿದೆ.


ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸರ್ವ ವಿಧದ ಸಹಕಾರಗಳನ್ನಿತ್ತು ಶ್ರೀ ದೇವರ ಪ್ರಸಾದವನ್ನು ಸ್ವೀಕರಿಸಿ, ಶ್ರೀ ಮಹಾವಿಷ್ಣುಮೂರ್ತಿ ದೇವರ ಕೃಪೆಗೆ ಪಾತ್ರರಾಗಬೇಕಾಗಿ ಶ್ರೀ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಿಶ್ವಜಿತ್ ಅಮ್ಮುಂಜ ಹಾಗೂ ಸದಸ್ಯರು, ಕ್ಷೇತ್ರದ ಅರ್ಚಕರು ಹಾಗೂ ಊರ ಹತ್ತು ಸಮಸ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here