







ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿದ ಕಾರು ಹೆದ್ದಾರಿ ಬದಿಯ ಸುಮಾರು 70 ಅಡಿ ಆಳದ ಹೊಂಡಕ್ಕೆ ಉರುಳಿ ಬಿದ್ದ ಘಟನೆ ಮೇ.22ರಂದು ಸಂಜೆ ರಾಷ್ಟ್ರೀಯ ಹೆದ್ದಾರಿ 75ರ ಉಪ್ಪಿನಂಗಡಿ ಸಮೀಪದ ಪಂಜಳದಲ್ಲಿ ನಡೆದಿದೆ.


ಪಟ್ರಮೆ ಗ್ರಾಮದ ದೇರಾಜೆ ನಿವಾಸಿ, ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯ ಸಂಚಾಲಕ ಪ್ರಶಾಂತ್ ದೇರಾಜೆ ಮತ್ತು ಅವರ ಸಹೋದರ ಪ್ರವೀಣ್ ದೇರಾಜೆ ಅವರು ಉಪ್ಪಿನಂಗಡಿಯಿಂದ ಪಟ್ಟೂರುಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದು ಉಪ್ಪಿನಂಗಡಿ ಸಮೀಪದ ಪಂಜಳ ಎಂಬಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ 70 ಅಡಿ ಆಳದ ಹೊಂಡಕ್ಕೆ ಬಿದ್ದಿದೆ. ಘಟನೆಯ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಸಹೋದರರಿಗೆ ಅಲ್ಪಸ್ವಲ್ಪ ತರಚಿದ ಗಾಯವಾಗಿದೆ ಎಂದು ವರದಿಯಾಗಿದೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ಪರಿಚಿತರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯದಲ್ಲಿ ಸಹಕರಿಸಿದರು ಎಂದು ತಿಳಿದುಬಂದಿದೆ.













