







ಕಡಬ: ಐತ್ತೂರು ಗ್ರಾ.ಪಂ ಅರಿವು ಕೇಂದ್ರದ ವತಿಯಿಂದ ಆಯೋಜಿಸಲಾದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಸುಜಾತ ಕೆ ಅಧ್ಯಕ್ಷತೆಯಲ್ಲಿ ನಡೆಯಿತು.


ಗ್ರಾ.ಪಂ ಸಿಬ್ಬಂದಿ ವರ್ಗದವರು, ಕಾವೇರಿ ಸಂಜೀವಿನಿ ಒಕ್ಕೂಟದ ಎಲ್ಸಿಆರ್ಪಿಯವರು ಸಹಕಾರ ನೀಡಿದರು. ಮಕ್ಕಳು ಅನಿಸಿಕೆ ವ್ಯಕ್ತಪಡಿಸಿದರು. ಭಾಗವಹಿಸಿದ 18 ಮಕ್ಕಳಿಗೆ ಅಭಿವೃದ್ಧಿ ಅಧಿಕಾರಿ ಸುಜಾತ ಕೆ ಬಹುಮಾನ ವಿತರಿಸಿದರು. ಗ್ರಾ.ಪಂ ಸಿಬ್ಬಂದಿ ಚೈತ್ರ ಸ್ವಾಗತಿಸಿದರು. ಗ್ರಂಥಾಲಯ ಮೇಲ್ವಿಚಾರಕಿ ವೇಜಸ್ರೀ ಕಾರ್ಯಕ್ರಮ ನಿರೂಪಿಸಿದರು.













