







ಪುತ್ತೂರು: ಮುಂಡೂರು ಗ್ರಾ.ಪಂ ಹಾಗೂ ಗ್ರಾ.ಪಂ ಅರಿವು ಕೇಂದ್ರದ ವತಿಯಿಂದ ಓದುವ ಬೆಳಕು ಕಾರ್ಯಕ್ರಮದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ನಡೆಯಿತು. ಆಡಳಿತಾಧಿಕಾರಿ ಸುನೀತಾ ಕುಮಾರಿ, ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಜಗದೀಶ್ ನಾಯ್ಕ ಕಾರ್ಯಕ್ರಮ ಉದ್ಘಾಟಿಸಿದರು. ಗ್ರಾ.ಪಂ ಸಿಬ್ಬಂದಿ ಶಶಿಧರ್ ಕೆ ಸ್ವಾಗತಿಸಿದರು. ಕಾರ್ಯದರ್ಶಿ ಸೂರಪ್ಪ. ಕೆ ವಂದಿಸಿದರು.



ಮೇ.21ರಂದು ಬೇಸಿಗೆ ಶಿಬಿರದ ಸಮಾರೋಪ ಕಾರ್ಯಕ್ರಮ ನಡೆಯಿತು. ಅತಿಥಿಯಾಗಿದ್ದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದ.ಕ ಇದರ ಅಧಿಕಾರಿ ಶ್ರೀಕಾಂತ್ ಬಿರಾವು ಅವರು ಅರಿವು ಕೇಂದ್ರಕ್ಕೆ 24 ಉತ್ತಮ ಗ್ರಂಥಗಳನ್ನು ಕೊಡುಗೆಯಾಗಿ ನೀಡಿದರು. ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ಇದರ ಅಧಿಕಾರಿ ಉಲ್ಲಾಸ್ ಕೆ ಟಿ ಕೆ ಶಿಬಿರದ ಸದುಪಯೋಗದ ಮಹತ್ವದ ಬಗ್ಗೆ ಹೇಳಿದರು. ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ಹಾಗೂ ಎಲ್ಲರಿಗೂ ಪೌಚ್ ನೀಡಿ ಪ್ರಥಮ ಮತ್ತು ದ್ವಿತೀಯ ಬಹುಮಾನ ನೀಡಲಾಯಿತು.



ಗ್ರಾ.ಪಂ ಸಿಬ್ಬಂದಿ ಶಶಿಧರ್ ಕೆ ಕಾರ್ಯಕ್ರಮ ನಿರೂಪಿಸಿದರು. ಗ್ರಂಥಾಲಯ ಮೇಲ್ವಿಚಾರಕಿ ಕವಿತಾ ಎಂ.ಎಸ್ ವಂದಿಸಿದರು.
ಗ್ರಂಥಾಲಯ ಮೇಲ್ವಿಚಾರಕಿ ಕವಿತಾ ಎಂ.ಎಸ್ ಹಾಗೂ ಗ್ರಾ.ಪಂ ಸಿಬ್ಬಂದಿ ಸತೀಶ್ ಎಚ್ ಅವರು ಅದೃಷ್ಟದ ಆಟ ಆಡಿಸಿ ವಿಜೇತರಿಗೆ ತಮ್ಮ ವತಿಯಿಂದ ಬಹುಮಾನ ನೀಡಿದರು. ಗ್ರಾ.ಪಂ ಅಧಿಕಾರಿಗಳು, ಸಿಬ್ಬಂದಿಗಳು, ಸಂಜೀವಿನಿ ಸಂಘದವರು ಸಹಕರಿಸಿದರು.









