







ಸಂಚಾಲಕ: ಸಹಕಾರರತ್ನ ದಂಬೆಕ್ಕಾನ ಸದಾಶಿವ ರೈ, ಸಹಸಂಚಾಲಕ: ಸಾಜ ರಾಧಾಕೃಷ್ಣ ಆಳ್ವ, ನಾಮನಿರ್ದೇಶಿತ ಸದಸ್ಯರಾಗಿ ಜೈರಾಜ್ ಭಂಡಾರಿ, ದಯಾನಂದ ರೈ ಕೊರ್ಮಂಡ, ಸುದೇಶ್ ಆರ್. ಶೆಟ್ಟಿ


ಪುತ್ತೂರು: ಬಂಟರ ಯಾನೆ ನಾಡವರ ಮಾತೃ ಸಂಘದ ಪುತ್ತೂರು ತಾಲೂಕು ಸಮಿತಿಯ ನೂತನ ಸಂಚಾಲಕರಾಗಿ ಸಹಕಾರರತ್ನ ದಂಬೆಕ್ಕಾನ ಸದಾಶಿವ ರೈ ಹಾಗೂ ಸಹಸಂಚಾಲಕರಾಗಿ ಸಾಜ ರಾಧಾಕೃಷ್ಣ ಆಳ್ವರವರು ಆಯ್ಕೆಯಾಗಿದ್ದಾರೆ. ಬಂಟರ ಯಾನೆ ನಾಡವರ ಮಾತೃ ಸಂಘದ ಉಪಾಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಅಧ್ಯಕ್ಷತೆಯಲ್ಲಿ ಮೇ.21 ರಂದು ಜರಗಿದ ಸಭೆಯಲ್ಲಿ ಈ ಆಯ್ಕೆ ನಡೆಯಿತು. ಮಾತೃ ಸಂಘದ ಪುತ್ತೂರು ತಾಲೂಕು ಸಮಿತಿಗೆ ಜೈರಾಜ್ ಭಂಡಾರಿ ಡಿಂಬ್ರಿ, ದಯಾನಂದ ರೈ ಕೋರ್ಮಂಡ ಹಾಗೂ ಸುದೇಶ್ ಆರ್ ಶೆಟ್ಟಿ ಅವರನ್ನು ನಾಮನಿರ್ದೇಶಿತ ಸದಸ್ಯರನ್ನಾಗಿ ಆಯ್ಕೆ ಮಾಡಲಾಯಿತು. ಸಭೆಯಲ್ಲಿ ಮಾತೃ ಸಂಘದ ಪುತ್ತೂರು ತಾಲೂಕು ಸಮಿತಿಯ ನಿಕಟಪೂರ್ವ ಅಧ್ಯಕ್ಷ ಕುಂಬ್ರ ದುರ್ಗಾಪ್ರಸಾದ್ ರೈ, ಮಾತೃ ಸಂಘದ ನಿರ್ದೇಶಕರುಗಳಾದ ದಯಾನಂದ ರೈ ಮನವಳಿಕೆಗುತ್ತು ಜಯಪ್ರಕಾಶ್ ರೈ ನೂಜಿಬೈಲು, ನಿತ್ಯಾನಂದ ಶೆಟ್ಟಿ ಮನವಳಿಕೆ, ಪ್ರಸನ್ನಕುಮಾರ್ ಶೆಟ್ಟಿ ಹಾಗೂ ವತ್ಸಲಾ ಪಿ.ಶೆಟ್ಟಿರವರುಗಳು ಉಪಸ್ಥಿತರಿದ್ದರು.



ದಂಬೆಕ್ಕಾನ ಸದಾಶಿವ ರೈ:
ನೂತನ ಸಂಚಾಲಕರಾಗಿ ಆಯ್ಕೆಯಾದ ಸಹಕಾರತ್ನ ದಂಬೆಕ್ಕಾನ ಸದಾಶಿವ ರೈಯವರು ಸಹಕಾರ ಕ್ಷೇತ್ರದಲ್ಲಿ ಅಪಾರವಾದ ಅನುಭವವನ್ನು ಹೊಂದಿದ್ದಾರೆ. ರೋಯಲ್ ಸೌಹಾರ್ದ ಸಹಕಾರಿ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದು, ಡಾ.ಪಿ.ಬಿ.ಪ್ರತಿಷ್ಠಾನದ ರೂವಾರಿ, ಕೆಯ್ಯೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ, ವಿಶ್ವ ಹಿಂದೂ ಪರಿಷತ್ ಪುತ್ತೂರು ಅಧ್ಯಕ್ಷರಾಗಿ ಸೇವೆಸಲ್ಲಿಸಿದ್ದು, ಪುತ್ತೂರು ತಾಲೂಕು ಬಂಟರ ಸಂಘದ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಸಾಜ ರಾಧಾಕೃಷ್ಣ ಆಳ್ವ :
ಸಹ ಸಂಚಾಲಕರಾಗಿ ಆಯ್ಕೆಯಾಗಿರುವ ಸಾಜ ರಾಧಾಕೃಷ್ಣ ಆಳ್ವರವರು ಜಿಲ್ಲಾ ಪಂಚಾಯತ್ ಸದಸ್ಯರಾಗಿ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷರಾಗಿ, ಪುತ್ತೂರು ತಾಲೂಕು ಯುವ ಬಂಟರ ಸಂಘದ ಸ್ಥಾಪಕಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.
ಜೈರಾಜ್ ಭಂಡಾರಿ:
ನಾಮ ನಿರ್ದೇಶಿತ ಸದಸ್ಯರಾಗಿರುವ ಜೈರಾಜ್ ಭಂಡಾರಿ ನೊಣಾಲು ಡಿಂಬ್ರಿಯವರು ಸಾಮಾಜಿಕ ಮತ್ತು ಧಾರ್ಮಿಕ ಮುಂದಾಳುವಾಗಿದ್ದು, ಯಕ್ಷಧ್ರುವ ಪಟ್ಲ ಫೌಂಡೇಶನ್ ಪುತ್ತೂರು ತಾಲೂಕು ಘಟಕದ ಅಧ್ಯಕ್ಷರಾಗಿದ್ದರು, ಪ್ರಸ್ತುತ ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ದಯಾನಂದ ರೈ ಕೋರ್ಮಂಡ:
ದಯಾನಂದ ರೈ ಕೋರ್ಮಂಡರವರು ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆಸಲ್ಲಿಸಿದ್ದು, ಪುತ್ತೂರು ತಾಲೂಕು ಬಂಟರ ಸಂಘದ ನಿರ್ದೇಶಕರಾಗಿರುತ್ತಾರೆ.
ಸುದೇಶ್ ಆರ್. ಶೆಟ್ಟಿ :
ಸುದೇಶ್ ಆರ್. ಶೆಟ್ಟಿ ಅವರು ಉದ್ಯಮಿಯಾಗಿದ್ದು, ಪುತ್ತೂರು ರೈ ಚಾರಿಟೇಬಲ್ ಟ್ರಸ್ಟ್ ಸಂಸ್ಥೆಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ
1 ಕೋಟಿ ರೂ. ವೆಚ್ಚದಲ್ಲಿ ಪುತ್ತೂರು ಬಂಟರ ಭವನ ನವೀಕರಣ
ಬಂಟರ ಯಾನೆ ನಾಡವರ ಮಾತೃ ಸಂಘದ ವತಿಯಿಂದ ನಡೆಸಲ್ಪಡುವ ಪುತ್ತೂರು ಎಂ. ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನವು ಸುಮಾರು 1 ಕೋಟಿ ರೂ. ವೆಚ್ಚದಲ್ಲಿ ನವೀಕರಣಗೊಳ್ಳಲಿದೆ. ಸಂಪೂರ್ಣ ಹವಾನಿಯಂತ್ರಿತ( ಎಸಿ) ವ್ಯವಸ್ಥೆಯೊಂದಿಗೆ ಸಭಾಭವನವು ಹೊಸರೂಪ ತಾಳಲಿದೆ. ಜೊತೆಗೆ ವಿವಿಧ ಸೌಲಭ್ಯಗಳು ಲಭ್ಯವಾಗಲಿದೆ. ಬಂಟರ ಯಾನೆ ನಾಡವರ ಮಾತೃ ಸಂಘದ ಪುತ್ತೂರು ತಾಲೂಕು ಸಮಿತಿಯ ನೂತನ ಸಂಚಾಲಕ ಸಹಕಾರರತ್ನ ದಂಬೆಕ್ಕಾನ ಸದಾಶಿವ ರೈರವರ ಸಾರಥ್ಯದಲ್ಲಿ ಹತ್ತು ಹಲವು ಯೋಜನೆಗಳು ಕಾರ್ಯರೂಪಕ್ಕೆ ಬರಲಿದೆ.

ಕಾವು ಹೇಮನಾಥ ಶೆಟ್ಟಿ ಉಪಾಧ್ಯಕ್ಷರು
ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು










