ಪುತ್ತೂರು: ವಿದ್ಯುತ್ ಶಾಕ್ ಹೊಡೆದು ಯುವಕ ಮೃತ್ಯು

0

ಪುತ್ತೂರು: ನಿಡಳ್ಳಿ ಗ್ರಾಮದ ಬೋಳುಂಬುಡೆಯಲ್ಲಿ ವಿದ್ಯುತ್ ಶಾಕ್ ಹೊಡೆದು ಬೇಲೂರು ಮೂಲದ ಯುವಕ ಮೃತಪಟ್ಟ ಘಟನೆ ಮೇ.24ರಂದು ರಾತ್ರಿ ಸಂಭವಿಸಿದೆ.

ಬೇಲೂರಿನ ಅಂಕಿಹಳ್ಳಿ ನಿವಾಸಿ ಜೋಕಿಂ ಪಿಂಟೋ ಅವರ ಪುತ್ರ ರೋಶನ್ ಪಿಂಟೋ (29) ಮೃತ ಯುವಕ.

ಜೋಕಿಂ ಅವರು ಪತ್ನಿ, ಇಬ್ಬರು ಮಕ್ಕಳೊಂದಿಗೆ ಮಾವನ ಮನೆ ನಿಡಳ್ಳಿಯ ಬೋಳುಂಬುಡೆಗೆ ಬಂದಿದ್ದರು. ರೋಶನ್ ರಾತ್ರಿ ಸ್ನಾನ ಮುಗಿಸಿ ಬಟ್ಟೆ ಒಗೆಯುವ ಸ್ಥಳಕ್ಕೆ ಹೋದಾಗ ಅಲ್ಲಿದ್ದ ವಿದ್ಯುತ್ ವಯರ್‌ನಿಂದ ಶಾಕ್ ಹೊಡೆದು ನೆಲಕ್ಕೆ ಬಿದ್ದಿದ್ದಾರೆ. ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ದೃಢಪಡಿಸಿದರು.

ರೋಶನ್ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ರಜೆಗೆ ಊರಿಗೆ ಬಂದಿದ್ದರು. ಮೃತರು ತಂದೆ, ತಾಯಿ, ಸಹೋದರಿಯನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here