ರಾಮಕುಂಜದ ಇಂಟರ್ನೆಟ್ ಸೇವಾ ಸಿಬ್ಬಂದಿ ಸೀತಾರಾಮ ಅರ್ಬಿ ಇವರಿಗೆ ಜೇಸಿಐ ಆಲಂಕಾರು ಘಟಕದಿಂದ ‘ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್’ ಪುರಸ್ಕಾರ

0

ಆಲಂಕಾರು: ಜೇಸಿಐ ಆಲಂಕಾರು ಘಟಕದ ವತಿಯಿಂದ ಮೇ ತಿಂಗಳ ‘ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್’ ಕಾರ್ಯಕ್ರಮ ಆಲಂಕಾರಿನ ಶ್ರೀ ದುರ್ಗಾಂಬ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೇಸಿಐ ಆಲಂಕಾರು ಘಟಕದ ಅಧ್ಯಕ್ಷ ಜೇಸಿ ಮಹೇಶ್ ಪಾಟಾಳಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಘಟಕದ ನಿಕಟಪೂರ್ವಾಧ್ಯಕ್ಷ ಜೇಸಿ ಗುರುರಾಜ್ ರೈ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ 10 ವರ್ಷಗಳ ಕಾಲ ಆತೂರಿನ ಬಿಎಸ್‌ಎನ್‌ಎಲ್ ಕಚೇರಿಯಲ್ಲಿ ಲೈನ್‌ಮ್ಯಾನ್ ಆಗಿ ಸೇವೆ ಸಲ್ಲಿಸಿ, ಪ್ರಸ್ತುತ ಪ್ರಿನಿಟಿ ಸಂಸ್ಥೆಯಲ್ಲಿ ಬ್ರಾಡ್‌ಬ್ಯಾಂಡ್ ಇಂಟರ್ನೆಟ್ ಸೇವಾ ಸಿಬ್ಬಂದಿಯಾಗಿ ಸೇವೆ ಸಲ್ಲಿಸುತ್ತಿರುವ ರಾಮಕುಂಜದ ಸೀತಾರಾಮ ಅರ್ಬಿ ಅವರಿಗೆ ‘ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್’ ಪುರಸ್ಕಾರ ಪ್ರದಾನ ಮಾಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಘಟಕದ ಮಹಿಳಾ ಜೇಸಿ ಅಧ್ಯಕ್ಷೆ ಜೇಸಿ ಕೃತಿಕಾ ಟಿ. ರೈ, ಜೆಜೇಸಿ ಅಧ್ಯಕ್ಷೆ ಕೀರ್ತಿ ಶೆಟ್ಟಿ, ಜೇಸಿಐ ಆಲಂಕಾರು ಘಟಕದ ಪೂರ್ವಾಧ್ಯಕ್ಷರುಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.ಅಧ್ಯಕ್ಷ ಮಹೇಶ್ ಪಾಟಾಳಿ ಸ್ವಾಗತಿಸಿದರು. ಕಾರ್ಯದರ್ಶಿ ಜನಾರ್ದನ್ ಸುರ್ಯ ವಂದಿಸಿದರು. ಪೂರ್ವಾಧ್ಯಕ್ಷ ಜೇಸಿ ಗಣೇಶ್ ಕಟ್ಟಪುಣಿ ಸನ್ಮಾನಿತರ ಪರಿಚಯ ಮಾಡಿದರು. ಜೇಸಿ ಗುರುಕಿರಣ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here