ಕಾವು: ಗ್ರಾಮೀಣ ಭಾಗದಲ್ಲಿ ಗುಣಮಟ್ಟದ ಶಿಕ್ಷಣದ ಬೆಳಕು ಚೆಲ್ಲುತ್ತಿರುವ ಬುಶ್ರಾ ಆಂಗ್ಲ ಮಾಧ್ಯಮ ಶಾಲೆ

0

ಬುಶ್ರಾ ಆಂಗ್ಲ ಮಾಧ್ಯಮ ಶಾಲೆ ಕಾವು ಎಂಬ ಗ್ರಾಮೀಣ ಭಾಗದಲ್ಲಿ ಸುಸಜ್ಜಿತ ಸೌಲಭ್ಯಗಳೊಂದಿಗೆ ಕೆ.ಜಿ.ಯಿಂದ ಎಸ್‌ಎಸ್‌ಎಲ್‌ಸಿ ವರೆಗೆ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿರುವ ಶಿಕ್ಷಣ ಸಂಸ್ಥೆಯಾಗಿ ಗುರುತಿಸಿಕೊಂಡಿದೆ. ಇದೀಗ 28ನೇ ವರ್ಷದತ್ತ ಯಶಸ್ವಿಯಾಗಿ ಪಯಣಿಸುತ್ತಿರುವ ಈ ಶಿಕ್ಷಣ ಸಂಸ್ಥೆ, ಗ್ರಾಮೀಣ ಪರಿಸರದ ವಿದ್ಯಾರ್ಥಿಗಳಿಗೂ ನಗರ ಮಟ್ಟದ ಶಿಕ್ಷಣ ಸೌಲಭ್ಯಗಳನ್ನು ಒದಗಿಸುವ ಮೂಲಕ ಪೋಷಕರ ಮೆಚ್ಚುಗೆಗೆ ಪಾತ್ರವಾಗಿದೆ.

ಶಾಲೆಯು ಆರಂಭದಿಂದಲೂ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ ನೀಡುತ್ತಾ ಬಂದಿದ್ದು, ಶೈಕ್ಷಣಿಕ ಸಾಧನೆಗಳ ಜೊತೆಗೆ ಶಿಸ್ತು, ಸಂಸ್ಕಾರ ಮತ್ತು ಕೌಶಲ್ಯಾಭಿವೃದ್ಧಿಗೂ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತಿದೆ. ಹಲವು ವಿದ್ಯಾರ್ಥಿಗಳು ಈ ಸಂಸ್ಥೆಯಿಂದ ವಿದ್ಯಾಭ್ಯಾಸ ಪಡೆದು ಉನ್ನತ ಹುದ್ದೆಗಳನ್ನು ಅಲಂಕರಿಸಿರುವುದು ಶಾಲೆಯ ಹೆಮ್ಮೆಯ ವಿಷಯವಾಗಿದೆ.

ಪ್ರಸ್ತುತ ಶಾಲೆಯ ಅಧ್ಯಕ್ಷರಾಗಿ ಜನಾಬ್ ಅಬ್ದುಲ್ ಅಜೀಜ್ ಕಾರ್ಯನಿರ್ವಹಿಸುತ್ತಿದ್ದು, ನಿರ್ದೇಶಕರಾಗಿ ನೂರುದ್ದೀನ್ ಹಾಗೂ ಬದ್ರುದ್ದೀನ್ ಶಾಲೆಯ ಅಭಿವೃದ್ಧಿಗೆ ತಮ್ಮ ಅಮೂಲ್ಯ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಶಾಲಾ ಮುಖ್ಯೋಪಾಧ್ಯಾಯಿನಿಯಾಗಿ ದೀಪಿಕಾ ಚಾಕೋಟೆ ಅವರು ಸಮರ್ಥವಾಗಿ ಶಾಲೆಯನ್ನು ಮುನ್ನಡೆಸುತ್ತಿದ್ದಾರೆ.

ಶಾಲೆಯಲ್ಲಿ ಅನುಭವಸಂಪನ್ನ ಹಾಗೂ ಉನ್ನತ ತರಬೇತಿ ಪಡೆದ ಶಿಕ್ಷಕ ವೃಂದ ಕಾರ್ಯನಿರ್ವಹಿಸುತ್ತಿದ್ದು, ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡುತ್ತಿದ್ದಾರೆ. ವಿದ್ಯಾರ್ಥಿಗಳ ಸಂಚಾರ ಸೌಲಭ್ಯಕ್ಕಾಗಿ ಆರು ಮಾರ್ಗಗಳಲ್ಲಿ ಶಾಲಾ ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಜೊತೆಗೆ ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ಸ್ಕೇಟಿಂಗ್, ಈಜು ತರಬೇತಿ ಹಾಗೂ ಕರಾಟೆ ಶಿಕ್ಷಣವನ್ನು ಹೆಚ್ಚುವರಿಯಾಗಿ ಪರಿಚಯಿಸಲಾಗಿದೆ.

ಶೈಕ್ಷಣಿಕ ಕ್ಷೇತ್ರದಲ್ಲಿಯೂ ಶಾಲೆ ನಿರಂತರ ಸಾಧನೆ ಮಾಡುತ್ತಿದ್ದು, ಪ್ರತಿವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶವನ್ನು ದಾಖಲಿಸಿ ಸಂಸ್ಥೆಯ ಗೌರವವನ್ನು ಮತ್ತಷ್ಟು ಹೆಚ್ಚಿಸಿದೆ.

ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದೊಂದಿಗೆ ಉತ್ತಮ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಬುಶ್ರಾ ಆಂಗ್ಲ ಮಾಧ್ಯಮ ಶಾಲೆ ತನ್ನ ಸೇವೆಯನ್ನು ಸಮರ್ಪಕವಾಗಿ ಮುಂದುವರಿಸಿಕೊಂಡು ಹೋಗುತ್ತಿದೆ.


ಬುಶ್ರಾ ಸಂಸ್ಥೆಯ ವಿಶೇಷತೆಗಳು :
ಆಧುನಿಕ ತಂತ್ರಜ್ಞಾನಗಳ ಅಳವಡಿಕೆಯಿಂದ ಕೂಡಿದ ಸ್ಮಾರ್ಟ್ ಕ್ಲಾಸ್‌ರೂಮ್‌ಗಳು, ಅನುಭವಸಂಪನ್ನ ಹಾಗೂ ತರಬೇತಿ ಪಡೆದ ಶಿಕ್ಷಕರ ಬಳಗ, ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಉತ್ತೇಜನ ನೀಡುವ ವಿವಿಧ ಚಟುವಟಿಕೆಗಳು, ನೈತಿಕ ಮೌಲ್ಯಗಳ ಬೆಳೆಸುವ ಶಿಕ್ಷಣ ಪದ್ಧತಿ, ವಿದ್ಯಾರ್ಥಿಗಳ ಪ್ರತಿಭೆ ಅನಾವರಣಗೊಳಿಸುವ ವೇದಿಕೆಗಳು, ಉತ್ತಮ ಫಲಿತಾಂಶಗಳಿಗೆ ಮಾರ್ಗದರ್ಶನ, ಹಾಗೂ ಪಠ್ಯೇತರ ಚಟುವಟಿಕೆಗಳಿಗೆ ವಿಶೇಷ ಆದ್ಯತೆ ನೀಡಲಾಗುತ್ತದೆ. ಇದರೊಂದಿಗೆ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳು, ವಿಜ್ಞಾನ ಪ್ರದರ್ಶನಗಳು, ಭಾಷಣ ಸ್ಪರ್ಧೆಗಳು ಮತ್ತು ಇತರೆ ಪ್ರತಿಭಾ ಪ್ರದರ್ಶನಗಳ ಮೂಲಕ ವಿದ್ಯಾರ್ಥಿಗಳ ಆತ್ಮವಿಶ್ವಾಸವನ್ನು ವೃದ್ಧಿಸಲಾಗುತ್ತದೆ.

ಇಂಗ್ಲಿಷ್ ಲ್ಯಾಬ್ :
ವಿದ್ಯಾರ್ಥಿಗಳ ಮಾತುಕತೆ ಹಾಗೂ ಉಚ್ಚಾರಣಾ ಕೌಶಲ್ಯವನ್ನು ಅಭಿವೃದ್ಧಿಪಡಿಸಲು ಅತ್ಯಾಧುನಿಕ ಇಂಗ್ಲಿಷ್ ಲ್ಯಾಬ್ ವ್ಯವಸ್ಥೆ ಕಲ್ಪಿಸಲಾಗಿದೆ. ಇದರ ಮೂಲಕ ವಿದ್ಯಾರ್ಥಿಗಳು ಸುಲಭವಾಗಿ ಇಂಗ್ಲಿಷ್ ಭಾಷೆಯನ್ನು ಅರ್ಥಮಾಡಿಕೊಂಡು ಆತ್ಮವಿಶ್ವಾಸದಿಂದ ಮಾತನಾಡಲು ತರಬೇತಿ ಪಡೆಯುತ್ತಾರೆ.

ಪಠ್ಯ ಪ್ರವಾಸ :
ವಿದ್ಯಾರ್ಥಿಗಳ ಪ್ರಾಯೋಗಿಕ ಜ್ಞಾನ ಹಾಗೂ ಸಾಮಾನ್ಯ ತಿಳುವಳಿಕೆಯನ್ನು ವಿಸ್ತರಿಸುವ ಉದ್ದೇಶದಿಂದ ಪ್ರತಿವರ್ಷ ಶೈಕ್ಷಣಿಕ ಪಠ್ಯ ಪ್ರವಾಸಗಳನ್ನು ಆಯೋಜಿಸಲಾಗುತ್ತದೆ. ಇದರಿಂದ ವಿದ್ಯಾರ್ಥಿಗಳಿಗೆ ಹೊಸ ಸ್ಥಳಗಳ ಪರಿಚಯದೊಂದಿಗೆ ಶಿಕ್ಷಣಾತ್ಮಕ ಅನುಭವವೂ ದೊರೆಯುತ್ತದೆ.

ಈ ಬಾರಿ ಪ್ರಥಮ ಬಾರಿಗೆ ನಮ್ಮ ಶಾಲೆಯಲ್ಲಿ ಸ್ಕೇಟಿಂಗ್ ಹಾಗೂ ಈಜು ತರಬೇತಿಯನ್ನು ಹೊಸದಾಗಿ ಪರಿಚಯಿಸಲಾಗುತ್ತಿದೆ. ನುರಿತ ಹಾಗೂ ಅನುಭವಸಂಪನ್ನ ತರಬೇತುದಾರರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ತರಬೇತಿ ನೀಡಲಾಗುವುದು.

ನಮ್ಮ ಶಾಲೆಯು ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುವ ಉದ್ದೇಶದಿಂದ ಹಲವು ವಿಶೇಷ ಸೌಲಭ್ಯಗಳನ್ನು ಕಲ್ಪಿಸಿದೆ. ಶಾಲೆಯಲ್ಲಿ ಸುಸಜ್ಜಿತ ಕಂಪ್ಯೂಟರ್ ಲ್ಯಾಬ್, ಸ್ಮಾರ್ಟ್ ಕ್ಲಾಸ್‌ರೂಂ, ಗ್ರಂಥಾಲಯ, ವಿಜ್ಞಾನ ಪ್ರಯೋಗಾಲಯ ಹಾಗೂ ವಿಶಾಲವಾದ ಆಟದ ಮೈದಾನಗಳ ವ್ಯವಸ್ಥೆ ಇದೆ. ಜೊತೆಗೆ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ಯೋಗ, ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳು, ಭಾಷಣ, ಹಾಡು, ನೃತ್ಯ, ಚಿತ್ರಕಲೆ ಹಾಗೂ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತದೆ. ಅನುಭವಸಂಪನ್ನ ಶಿಕ್ಷಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣದ ಜೊತೆಗೆ ಶಿಸ್ತು ಮತ್ತು ಸಂಸ್ಕಾರಗಳನ್ನೂ ಕಲ್ಪಿಸಲಾಗುತ್ತಿದೆ.

ಶಾಲಾ ಬಸ್ ವ್ಯವಸ್ಥೆ
ನಮ್ಮ ಶಾಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಅನುಕೂಲತೆಯನ್ನು ಗಮನದಲ್ಲಿಟ್ಟುಕೊಂಡು ಸುಸಜ್ಜಿತವಾದ ಶಾಲಾ ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. , ಕುಂಬ್ರ, ಸಂಪ್ಯ, ಪೆರ್ಲಂಪಾಡಿ, ಕನಕಮಜಲು ಸುಳ್ಯಪದವು,ಪಟ್ಟೆ, ತಿಂಗಳಾಡಿ, ಈಶ್ವರಮಂಗಳ,ದೇಲಂಪಾಡಿ ಸೇರಿದಂತೆ ವಿವಿಧ ಭಾಗಗಳಿಗೆ ಬಸ್ ಸೌಲಭ್ಯವನ್ನು ಒದಗಿಸಲಾಗಿದೆ. ಅನುಭವಸಂಪನ್ನ ಚಾಲಕರು ಹಾಗೂ ಸಹಾಯಕರೊಂದಿಗೆ ವಿದ್ಯಾರ್ಥಿಗಳು ಸುರಕ್ಷಿತವಾಗಿ ಶಾಲೆಗೆ ಆಗಮಿಸಿ ಮನೆಗೆ ತಲುಪುವಂತೆ ವಿಶೇಷ ಕಾಳಜಿ ವಹಿಸಲಾಗುತ್ತದೆ.

ಗ್ರಾಮೀಣ ಪ್ರದೇಶದಲ್ಲಿ ಸುಮಾರು 28 ವರ್ಷಗಳ ಹಿಂದೆ ಈ ವಿದ್ಯಾ ಸಂಸ್ಥೆಯನ್ನು ಆರಂಭಿಸಲಾಗಿದ್ದು, ಇಂದು ಸಾವಿರಾರು ವಿದ್ಯಾರ್ಥಿ-ವಿದ್ಯಾರ್ಥಿನಿಯರು ವೈದ್ಯಕೀಯ, ತಾಂತ್ರಿಕ ಹಾಗೂ ವಿವಿಧ ವೃತ್ತಿಪರ ಕ್ಷೇತ್ರಗಳಲ್ಲಿ ದೇಶ-ವಿದೇಶಗಳಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಿಕೊಂಡಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿಯಾಗಿದೆ. ಪ್ರಸ್ತುತ ನಮ್ಮ ಶಿಕ್ಷಣ ಸಂಸ್ಥೆಯು ಕಾಲಾನುಗುಣವಾಗಿ ವಿದ್ಯಾರ್ಥಿಗಳಿಗೆ ಅಗತ್ಯವಾದ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದ್ದು, ಪಠ್ಯಪುಸ್ತಕಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳನ್ನೂ ಒಳಗೊಂಡ ಸಮಗ್ರ ಶಿಕ್ಷಣ ವ್ಯವಸ್ಥೆಯನ್ನು ರೂಪಿಸಿದೆ. ಇಲ್ಲಿಯವರೆಗೆ ಪೋಷಕರು ನೀಡಿದ ಅಮೂಲ್ಯ ಸಹಕಾರದಂತೆ, ಮುಂದೆಯೂ ನಿಮ್ಮೆಲ್ಲರ ಸಹಕಾರ ಮತ್ತು ಪ್ರೋತ್ಸಾಹವನ್ನು ಹಾರೈಸುತ್ತೇನೆ. ಗ್ರಾಮೀಣ ಪ್ರದೇಶದ ಪ್ರತಿಯೊಂದು ಮಗುವಿಗೂ ಆಂಗ್ಲ ಮಾಧ್ಯಮದಲ್ಲಿಯೇ ಉತ್ತಮ ಶಿಕ್ಷಣ ದೊರಕಬೇಕು ಎಂಬುದು ನನ್ನ ಆಶಯವಾಗಿದ್ದು, ಅದೇ ನನ್ನ ಪರಮೋಚ್ಚ ಗುರಿಯಾಗಿದೆ.
ಅಬ್ದುಲ್ ಅಜೀಜ್,
ಅಧ್ಯಕ್ಷರು, ಬುಶ್ರಾ ಆಂಗ್ಲ ಮಾಧ್ಯಮ ಶಾಲೆ ಕಾವು

LEAVE A REPLY

Please enter your comment!
Please enter your name here