ಇಂಧನ ಉಳಿಸಿ ಪ್ರಧಾನಿ ಮೋದಿ ಕರೆಗೆ ಸ್ಪಂದನೆ : ಕೆದಂಬಾಡಿ ಕೆಯ್ಯೂರು ಪ್ರಾ.ಕೃ.ಪ.ಸಹಕಾರಿ ಸಂಘದಿಂದ ವಿಶೇಷ ಆಫರ್ – ಇಲೆಕ್ಟ್ರಿಕ್ ವಾಹನಗಳ ಮೇಲೆ ಶೇ.10.50 ಬಡ್ಡಿ ದರದಲ್ಲಿ ಸಾಲ ಸೌಲಭ್ಯ

0

ಪುತ್ತೂರು: ಕೊಲ್ಲಿ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ತೈಲ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿದ್ದು ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಇಂಧನ ಉಳಿಸಿ, ಚಿನ್ನ ಖರೀದಿಸುವುದನ್ನು ವರ್ಷಗಳ ಕಾಲ ಮುಂದೂಡಿ ಅದೇ ರೀತಿ ಇಲೆಕ್ಟ್ರಿಕ್ ವಾಹನಗಳನ್ನು ಹೆಚ್ಚಾಗಿ ಬಳಸಿ ಎಂದು ದೇಶದ ಜನತೆಗೆ ಕರೆ ನೀಡುವ ಮೂಲಕ ಮನವಿ ಮಾಡಿಕೊಂಡಿದ್ದು ಈ ಹಿನ್ನೆಲೆಯಲ್ಲಿ ಕೆದಂಬಾಡಿ ಕೆಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ವಿಶೇಷ ಆಫರ್ ನೀಡಿದ್ದು ಇಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವ ಗ್ರಾಹಕರಿಗೆ ಶೇ.10.50 ಬಡ್ಡಿ ದರದಲ್ಲಿ ಸಾಲ ಸೌಲಭ್ಯಗಳನ್ನು ನೀಡಲು ಮುಂದಾಗಿದೆ.


ಇಲೆಕ್ಟ್ರಿಕ್ ದ್ವಿಚಕ್ರ ಹಾಗೂ ನಾಲ್ಕು ಚಕ್ರದ ವಾಹನಗಳ ಮೇಲೆ ಈ ಆಫರ್ ನೀಡಲಾಗಿದ್ದು ಶೇ.10.50 ಬಡ್ಡಿ ದರದಲ್ಲಿ ಸಾಲ ಸೌಲಭ್ಯ ನೀಡಲಾಗುತ್ತಿದ್ದು, ಈ ಆಫರ್ ಜೂನ್ 1 ರಿಂದ 30ರ ತನಕ ಅಂದರೆ ಒಂದು ತಿಂಗಳು ಮಾತ್ರ ಇರಲಿದ್ದು, ಸಂಘದ ಸದಸ್ಯರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಸಂಘದ ಅಧ್ಯಕ್ಷ ಕೃಷ್ಣ ಕುಮಾರ್ ರೈ ಕೆದಂಬಾಡಿಗುತ್ತು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿನಯ ಕುಮಾರ್ ರೈ ದೇರ್ಲರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಇವಿ ವಾಹನಗಳ ಖರೀದಿಗೆ ಶೇ.10.50 ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಆಫರ್ ಜೂ.1ರಿಂದ 30 ರ ತನಕ ಮಾತ್ರ ಇರಲಿದೆ. ಈ ಆಫರ್ ಅನ್ನು ಹೊರತುಪಡಿಸಿ ವಾಹನಗಳ ಖರೀದಿಗೆ ಶೇ.12 ಬಡ್ಡಿ ದರ ಇರಲಿದೆ ಆದ್ದರಿಂದ ಈ ಆಫರ್ ಅನ್ನು ಸದುಪಯೋಗಪಡಿಸಿಕೊಳ್ಳುವಂತೆ ವಿನಂತಿಸಲಾಗಿದೆ.

LEAVE A REPLY

Please enter your comment!
Please enter your name here