ಕೆಪಿಎಸ್ ಕೆಯ್ಯೂರು ಪಿಯುಸಿ ತರಗತಿ ಪ್ರಾರಂಭೋತ್ಸವ

0

ಕೆಯ್ಯೂರು: ಕರ್ನಾಟಕ ಪಬ್ಲಿಕ್ ಸ್ಕೂಲ್ ಕೆಯ್ಯೂರು ಪದವಿಪೂರ್ವ ಕಾಲೇಜು ವಿಭಾಗದ 2026-27ನೇ ಸಾಲಿನ ಪ್ರಾರಂಭೋತ್ಸವ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.

ಪ್ರಾಚಾರ್ಯರಾದ ಹಸೀನಾ ಬಾನು ಎಸ್. ಇ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲರಾದ ಅರುಣ್ ಕುಮಾರ್ ಪಿ ಶುಭ ಹಾರೈಸಿದರು. ಉಪನ್ಯಾಸಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಿಗೆ ಪೆನ್ನು ಮತ್ತು ಸಿಹಿತಿಂಡಿ ನೀಡಿ ಸ್ವಾಗತಿಸಲಾಯಿತು. ವಿದ್ಯಾರ್ಥಿನಿ ಸುಪ್ರೀತಾ ಪ್ರಾರ್ಥಿಸಿದರು. ರಾಜ್ಯಶಾಸ್ತ್ರ ಉಪನ್ಯಾಸಕ ಇಸ್ಮಾಯಿಲ್ ಪಿ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಇತಿಹಾಸ ಉಪನ್ಯಾಸಕಿ ಉಮಾಶಂಕರಿ ಎಸ್.ಕೆ ವಂದಿಸಿದರು.

LEAVE A REPLY

Please enter your comment!
Please enter your name here