ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625 ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಹನುಮಗಿರಿ ಶ್ರೀ ಗಜಾನನ ಆಂಗ್ಲ ಮಾಧ್ಯಮ ಶಾಲೆಯ ಅನನ್ಯಾ ಎ

0

ಈಶ್ವರಮಂಗಲ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB)ನಡೆಸಿದ 2025-26 ನೇ ಸಾಲಿನ ಎಸ್‌ಎಸ್‌ಎಲ್‌ಸಿ  (SSLC)  ವಾರ್ಷಿಕ ಪರೀಕ್ಷೆ-2 ರ ಫಲಿತಾಂಶ ಪ್ರಕಟವಾಗಿದ್ದು ಹನುಮಗಿರಿ ಈಶ್ವರಮಂಗಲ ಶ್ರೀ ಗಜಾನನ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಅನನ್ಯಾ ಎ 625 ಕ್ಕೆ 625 ಪೂರ್ಣ ಅಂಕ ಪಡೆದು ರಾಜ್ಯಕ್ಕೆ ಪ್ರಥಮ ರ‍್ಯಾಂಕ್ ಗಳಿಸಿ ಸಾಧನೆ ಮಾಡಿದ್ದಾರೆ. ಶಾಲೆಯ ಕೀರ್ತಿ ಹೆಚ್ಚಿಸಿದ್ದಾರೆ. ಇವರು ಈಶ್ವರಮಂಗಲ ವಜ್ರಮೂಲೆ ಕಮಲಾಕ್ಷ ಆನಡ್ಕ (ಉಪನ್ಯಾಸಕರು ಸ.ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ) ಹಾಗೂ ಪ್ರಶಾಂತಿ ಜಿ ಕೆ (ಶಿಕ್ಷಕಿ) ದಂಪತಿಯ ಪುತ್ರಿ.

LEAVE A REPLY

Please enter your comment!
Please enter your name here