ಜೂ.2: ಪುಣಚ ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ಉಚಿತ ಕಣ್ಣಿನ ತಪಾಸಣೆ, ಚಿಕಿತ್ಸಾ ಶಿಬಿರ

0

ಪುಣಚ: ಹಾಲು ಉತ್ಪಾದಕರ ಸಹಕಾರಿ ಸಂಘ ಪುಣಚ, ಗ್ರಾಮ ವಿಕಾಸ ಸಮಿತಿ ಪುಣಚ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಉಚಿತ ಕಣ್ಣಿನ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ಜೂ.2ರಂದು ಬೆಳಿಗ್ಗೆ 9ರಿಂದ ಅಪರಾಹ್ನ 2ರವರೆಗೆ ಪುಣಚ ಹಾಲು ಉತ್ಪಾದಕರ ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆಯಲಿದೆ.


ಶಿಬಿರದಲ್ಲಿ ಉಚಿತ ಕಣ್ಣಿನ ತಪಾಸಣೆ, ಯಶಸ್ವಿನಿ ಕಾರ್ಡ್, ಅಂತ್ಯೋದಯ ಕಾರ್ಡ್ ಹೊಂದಿರುವ ಫಲಾನುಭವಿಗಳಿಗೆ ಉಚಿತ ಕಣ್ಣಿನ ಪೊರೆ ಶಸ್ತ್ರ’ಚಿಕಿತ್ಸೆ, ಅಗತ್ಯವುಳ್ಳವರಿಗೆ ಪ್ರಸಾದ ನೇತ್ರಾಲಯದಲ್ಲಿ ನಿಗದಿತ ದಿನಾಂಕದಂದು ಕಣ್ಣಿನ ಪೊರೆಯ ಶಸ್ತ್ರ ಚಿಕಿತ್ಸೆ ನಡೆಸಲಾಗುವುದು. ಎಪಿಎಲ್ ಹಾಗೂ ಬಿಪಿಎಲ್ ಕಾರ್ಡ್ ದಾರರಿಗೆ ರಿಯಾಯಿತಿ ದರದಲ್ಲಿ ಶಸ್ತ್ರ ಚಿಕಿತ್ಸೆ ಅಲ್ಲದೆ ಅಗತ್ಯ ಉಳ್ಳವರಿಗೆ ರಿಯಾಯಿತಿ ದರದಲ್ಲಿ ಕನ್ನಡಕ ನೀಡಲಾಗುವುದು. ಶಿಬಿರದಲ್ಲಿ ಮೊದಲು ನೊಂದಾವಣೆ ಮಾಡಿದ 200 ಮಂದಿಗೆ ಮಾತ್ರ ಅವಕಾಶವಿದ್ದು ಬೆಳಿಗ್ಗೆ 8ರಿಂದ11ರವರೆಗೆ‌ ಮಾತ್ರ ಟೋಕನ್ ನೀಡಲಾಗುವುದು. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಕಾರ್ಯಕ್ರಮದ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here