







ಪುತ್ತೂರು: ಶಾಲಾ ಶಿಕ್ಷಣ ಇಲಾಖೆಯ 2026-27ನೇ ಸಾಲಿನ ಪ್ರಾರಂಭೋತ್ಸವವು ಜೂನ್ 1ರಂದು ನಡೆಯಲಿದ್ದು, ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವೀರಮಂಗಲವು ತಳಿರು ತೋರಣಗಳಿಂದ ಮದುವಣಗಿತ್ತಿಯಂತೆ ಶೃಂಗಾರಗೊಂಡು ಹೊಸ ಶೈಕ್ಷಣಿಕ ವರ್ಷವನ್ನು ಸ್ವಾಗತಿಸಲು ಸಜ್ಜಾಗಿದೆ.



ಶಾಲಾ ಮುಖ್ಯಗುರು ತಾರಾನಾಥ ಸವಣೂರು ಅವರ ಮಾರ್ಗದರ್ಶನದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ರವಿಚಂದ್ರ, ಸದಸ್ಯರಾದ ರಝಾಕ್, ಹರೀಶ್ ಆಚಾರ್ಯ, ಸೋಮಶೇಖರ, ಸುರೇಶ, ಗೋಪಾಲಕೃಷ್ಣ ಸೇರಿದಂತೆ ಎಸ್‌ಡಿಎಂಸಿ ಸದಸ್ಯರು, ಹಿರಿಯ ವಿದ್ಯಾರ್ಥಿಗಳು ಹಾಗೂ ಶಾಲಾ ವಿದ್ಯಾರ್ಥಿಗಳು ಒಗ್ಗೂಡಿ ಶಾಲಾ ಆವರಣದ ಸ್ವಚ್ಛತಾ ಕಾರ್ಯ ನಡೆಸಿದರು.ಶಾಲೆಯನ್ನು ತಳಿರು ತೋರಣ, ಬಣ್ಣದ ಕಾಗದಗಳಿಂದ ಅಲಂಕರಿಸಿ ಸಂಭ್ರಮದ ವಾತಾವರಣ ನಿರ್ಮಿಸಲಾಗಿದೆ. ಪ್ರಾರಂಭೋತ್ಸವದ ಅಂಗವಾಗಿ ಮಕ್ಕಳು ಬ್ಯಾಂಡ್ ಘೋಷ್ ತಾಲೀಮು ನಡೆಸಿದ್ದು, ಹೊಸ ವಿದ್ಯಾರ್ಥಿಗಳನ್ನು ಅದ್ಧೂರಿಯಾಗಿ ಸ್ವಾಗತಿಸಲು ಸಿದ್ಧತೆ ನಡೆಸಿದ್ದಾರೆ.ಪಿಎಂಶ್ರೀ ಯೋಜನೆಯಡಿ ಆಯ್ಕೆಯಾದ ವೀರಮಂಗಲ ಶಾಲೆಯಲ್ಲಿ ಮೂಲಸೌಕರ್ಯ ಅಭಿವೃದ್ಧಿಯೊಂದಿಗೆ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲಾಗುತ್ತಿದ್ದು, ಪ್ರಾರಂಭೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಶಾಲಾಡಳಿತ ನಿರ್ಧರಿಸಿದೆ.












