ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಫಲಿತಾಂಶ : ಬಳ್ಳಕ್ಕ ಪೂರ್ಣೇಶ್ ಎಂ.ಬಿ.ವಿಶಿಷ್ಟ ಶ್ರೇಣಿ

0

ಕಡಬ: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ -2 ಫಲಿತಾಂಶ ಪ್ರಕಟಗೊಂಡಿದ್ದು ಗುತ್ತಿಗಾರು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿ, ಸುಳ್ಯ ತಾಲೂಕು ಗುತ್ತಿಗಾರು ಗ್ರಾಮದ ಬಳ್ಳಕ್ಕ ನಿವಾಸಿ ಪೂರ್ಣೇಶ್ ಎಂ.ಬಿ. ಅವರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ಈತ ಎಸ್‌ಎಸ್‌ಎಲ್‌ಸಿಯಲ್ಲಿ ಒಟ್ಟು 553(ಶೇ.88%) ಅಂಕ ಪಡೆದುಕೊಂಡು ವಿಶಿಷ್ಠ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಈತ ಗುತ್ತಿಗಾರು ನಿವ್ಯಶ್ರೀ ಹೋಟೆಲ್ ಮಾಲಕ, ಬಳ್ಳಕ್ಕ ನಿವಾಸಿ ಮೋನಪ್ಪ ಗೌಡ ಮತ್ತು ಪುಷ್ಪಾವತಿ ದಂಪತಿ ಪುತ್ರ.

LEAVE A REPLY

Please enter your comment!
Please enter your name here