







ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ಒದಗಿ ಬರಲಿ ಎಂದು ಹಾರೈಸಿ, ಅಲಡ್ಕ ಸದಾಶಿವ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.


ಈ ಸಂದರ್ಭದಲ್ಲಿ ಮಾತನಾಡಿದ ಭಕ್ತರು ಮತ್ತು ಪಕ್ಷದ ಕಾರ್ಯಕರ್ತರು, ಅಶೋಕ್ ಕುಮಾರ್ ರೈ ಅವರು ಶಾಸಕರಾಗಿ ಕ್ಷೇತ್ರದ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಅವರಿಗೆ ಸಚಿವ ಸ್ಥಾನ ದೊರೆತರೆ ಈ ಭಾಗದ ಸರ್ವಾಂಗೀಣ ಅಭಿವೃದ್ಧಿ ಮತ್ತಷ್ಟು ವೇಗ ಪಡೆಯಲಿದೆ ಎಂಬ ಆಶಯ ವ್ಯಕ್ತಪಡಿಸಿದರು.



ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಅಲಡ್ಕ ಸದಾಶಿವ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಅರುಣ್ ಕುಮಾರ್ ಆಳ್ವ, ಸಮಿತಿಯ ಸದಸ್ಯರಾದ ರಾಕೇಶ್ ರೈ ಬೋಲೋಡಿ, ಕೆದಂಬಾಡಿ ವಲಯ ಕಾಂಗ್ರೆಸ್ ಅಧ್ಯಕ್ಷರಾದ ಪುರಂದರ್ ರೈ ಕೋರಿಕ್ಕಾರ್, ಬ್ಲಾಕ್ ಉಪಾಧ್ಯಕ್ಷರಾದ ಮನೋಹರ್ ರೈ, ಕಿಸಾನ್ ಘಟಕದ ಅಧ್ಯಕ್ಷರಾದ ರಾಮನಾಥ್ ರೈ ಹಾಗೂ ಗಣ್ಯರಾದ ಸೀತಾರಾಮ್ ರೈ, ಗೋಪಾಲಕೃಷ್ಣ ರೈ, ಬೂತ್ ಅಧ್ಯಕ್ಷರಾದ ಭಾಸ್ಕರ್, ಸದಾಶಿವ ರೈ, ಉಮನಾಥ್ ರೈ, ರಂಜಿತ್ ರೈ ಮತ್ತು ರಂಜಿತ್ ಪೂಜಾರಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.










