







ವಿಟ್ಲ:ಅಕ್ರಮವಾಗಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ವಿಟ್ಲ ಠಾಣಾ ಪೊಲೀಸರು ದಾಳಿ ನಡೆಸಿ, ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಪುಣಚ ಗ್ರಾಮದ ಪೆರಿಯಾಲಡ್ಕ ಎಂಬಲ್ಲಿ ನಡೆದಿದೆ.


ಬಂಟ್ವಾಳ ತಾಲೂಕಿನ ಪುಣಚ ನಿವಾಸಿಗಳಾದ ದಿವಾಕರ ಪೂಜಾರಿ (46 ವ.) ಮತ್ತು ಯಶ್ವಂತ್ (34 ವ.) ಬಂಧಿತ ಆರೋಪಿಗಳಾಗಿದ್ದಾರೆ. ಮೇ 30ರಂದು ರಾತ್ರಿ ಪುಣಚ ಗ್ರಾಮದ ಪೆರಿಯಾಲ್ಡಡ್ಕ ಎಂಬಲ್ಲಿನ ಸಾರ್ವಜನಿಕ ಸ್ಥಳದಲ್ಲಿ ಕೋಳಿ ಅಂಕ ನಡೆಯುತ್ತಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣಾ ಉಪ ನಿರೀಕ್ಷಕರಾದ ರಾಮಕೃಷ್ಣ ರವರಿಗೆ ಬಂದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದೆ.



ದಾಳಿಯ ವೇಳೆ ಹಣವನ್ನು ಪಣವಾಗಿಟ್ಟು ಜೂಜಾಡುತ್ತಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ಥಳದಲ್ಲಿದ್ದ 4 ಅಂಕದ ಕೋಳಿಗಳು, ಜೂಜಾಟಕ್ಕೆ ಬಳಸುತ್ತಿದ್ದ ಕೋಳಿ ಕತ್ತಿ (ಬಾಳು), ಇತರೆ ಪರಿಕರಗಳು ಹಾಗೂ ರೂ.4,145 ನಗದು ಹಣವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿಗಳ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










