ಎಸ್‌ಎಸ್‌ಎಲ್‌ಸಿಯಲ್ಲಿ ರಾಜ್ಯಕ್ಕೆ ಪ್ರಥಮ – ಅನನ್ಯಾ ಎ.ಗೆ ಈಶ್ವರಮಂಗಳ ಹಾಲು ಉತ್ಪಾದಕರ ಸಂಘದಿಂದ ಸನ್ಮಾನ

0

ಪುತ್ತೂರು: 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ಹನುಮಗಿರಿ ಶ್ರೀ ಗಜಾನನ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಅನನ್ಯಾ ಎ. ಅವರನ್ನು ಈಶ್ವರಮಂಗಳ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ವಿದ್ಯಾರ್ಥಿನಿಯ ಸ್ವಗೃಹದಲ್ಲಿ ಗೌರವಿಸಲಾಯಿತು.

ಸಂಘದ ಅಧ್ಯಕ್ಷ ದಿನೇಶ್ ರೈ ಕುತ್ಯಾಳ ಅವರು ವಿದ್ಯಾರ್ಥಿನಿಯನ್ನು ಸನ್ಮಾನಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಶಿವರಾಮ ಶರ್ಮ ಕತ್ರಿಬೈಲ್, ಪ್ರೀತಾ ಪಿ. ರೈ ಮೇನಾಲ, ಅಣ್ಣು ನಾಯ್ಕ್ ಮೇನಾಲ, ಶ್ರೀ ಗಜಾನನ ವಿದ್ಯಾ ಸಂಸ್ಥೆಯ ನಿರ್ದೇಶಕ ಪ್ರವೀಣ್ ರೈ ಮೇನಾಲ, ಸಂಘದ ಕಾರ್ಯದರ್ಶಿ ವಿನಯ ಕುಮಾರ್ ಹಾಗೂ ವಿದ್ಯಾರ್ಥಿನಿಯ ಪೋಷಕರು ಉಪಸ್ಥಿತರಿದ್ದರು. 625ಕ್ಕೆ 625 ಅಂಕ ಪಡೆದು ಸಾಧನೆ ಮಾಡಿರುವ ಅನನ್ಯಾ ಅವರು ಶಾಲೆಗೆ, ತಾಲೂಕಿಗೆ ಹಾಗೂ ಊರಿಗೆ ಕೀರ್ತಿ ತಂದಿದ್ದಾರೆ ಎಂದು ಸಂಘದ ಪದಾಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.

LEAVE A REPLY

Please enter your comment!
Please enter your name here