






ಕಾಣಿಯೂರು: ಕಾಣಿಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಮತ್ತು ಎಲ್ ಕೆ ಜಿ, ಯುಕೆಜಿ ತರಗತಿಗಳ ಉದ್ಘಾಟನಾ ಕಾರ್ಯಕ್ರಮವು ಜೂ 1ರಂದು ನಡೆಯಿತು.



ಪ್ರಾರಂಭದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಆರತಿ ಬೆಳಗಿಸಿ, ತಿಲಕವನ್ನಿಟ್ಟು ಬರಮಾಡಿಕೊಳ್ಳಲಾಯಿತು. ಉದ್ಯಮಿ ಚಂದ್ರಶೇಖರ ಬರೆಪ್ಪಾಡಿ ಅವರು ಎಲ್ ಕೆ ಜಿ ಮತ್ತು ಯು ಕೆ ಜಿ ತರಗತಿಯನ್ನು ಉದ್ಘಾಟಿಸಿದರು. ಬಳಿಕ ನಡೆದ ಸಭಾಕಾರ್ಯಕ್ರಮವನ್ನು ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಅಧ್ಯಕ್ಷ ಪುಟ್ಟಣ್ಣ ಗೌಡ ಮುಗರಂಜ ಉದ್ಘಾಟಿಸಿದರು.



ಅಧ್ಯಕ್ಷತೆಯನ್ನು ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಪರಮೇಶ್ವರ ಗೌಡ ಅನಿಲ ವಹಿಸಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ಮತ್ತು ಪಠ್ಯಪುಸ್ತಕಗಳನ್ನು ವಿತರಿಸಲಾಯಿತು.
ಕಾಣಿಯೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಘು ಎನ್. ಬಿ ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಗಣೇಶ್ ಉದನಡ್ಕ, ಗ್ರಾಮ ಪಂಚಾಯತ್ ಮಾಜಿ ಸದಸ್ಯ ರಾಮಣ್ಣ ಗೌಡ ಮುಗರಂಜ, ಬೆಳಂದೂರು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಜಯಂತ ಅಬೀರ, ಮಾಜಿ ಸದಸ್ಯರಾದ ಗೌರಿ ಮಾದೋಡಿ, ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದ ಅಧ್ಯಕ್ಷ ರಾಜೇಶ್ ಮೀಜೆ, ಎಸ್ ಡಿ ಎಂ ಸಿ ಉಪಾಧ್ಯಕ್ಷೆ ಯಶೋಧ ನೆರೋಳ್ತಡ್ಕ, ಶಾಲಾ ಮುಖ್ಯಗುರು ಶಶಿಕಲಾ ಉಪಸ್ಥಿತರಿದ್ದರು.
ಎಸ್ ಡಿ ಎಂ ಸಿ ಸದಸ್ಯರಾದ ದಿನೇಶ್ ಅನ್ಯಾಡಿ, ಸೀತಾರಾಮ ಮಿತ್ತಮೂಲೆ, ಯಶಕಲಾ, ಆಶಾ ಕಟ್ಟತ್ತಾರು, ವಸಂತಿ ಅಜೀರಂಗಳ, ರಮೇಶ್ ಮಾದೋಡಿ ಚಂದ್ರಶೇಖರ ಬೈತಡ್ಕ, ಚಂದ್ರಶೇಖರ ಮಲೆಕೆರ್ಚಿ, ಸುಮಿತ್ರ ಬಂಡಾಜೆ, ಅಂಗನವಾಡಿ ಕಾರ್ಯಕರ್ತೆ ಜಯಶ್ರೀ ಉಪಸ್ಥಿತರಿದ್ದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಬಾಲಕೃಷ್ಣ ಕೆ ಸ್ವಾಗತಿಸಿ, ಶಿಕ್ಷಕಿ ಸರೋಜಾ ಪಿ. ಕೆ ವಂದಿಸಿದರು. ಶಿಕ್ಷಕಿ ವೀಕ್ಷಿತ ಕಾರ್ಯಕ್ರಮ ನಿರೂಪಿಸಿದರು.










