






ಪುತ್ತೂರು: ದರ್ಬೆ ಪಾಂಗಳಾಯಿ ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2026-27ನೇ ಸಾಲಿನ ಪೂರ್ವ ಪ್ರಾಥಮಿಕ ವಿಭಾಗದಿಂದ ಪೋಷಕರ ಸ್ವಾಗತ ಕಾರ್ಯಕ್ರಮವು ಮೇ.29ರಂದು ನಡೆಯಿತು.


ಸಂಪನ್ಮೂಲ ವ್ಯಕ್ತಿ ವಿನುತಾ ಅವರು ಕ್ರಿಡೋ ಪಠ್ಯಕ್ರಮ ಹಾಗೂ ಚಟುವಟಿಕೆ ಆಧಾರಿತ ಕಲಿಕಾ ವಿಧಾನಗಳ ಕುರಿತು ಮಾಹಿತಿ ನೀಡಿದರು. ಪ್ರಾಂಶುಪಾಲೆ ಭಗಿನಿ ಅನಿತಾ ಅವರು ಹೊಸ ಶೈಕ್ಷಣಿಕ ವರ್ಷದ ಮಾರ್ಗಸೂಚಿಗಳನ್ನು ಪೋಷಕರೊಂದಿಗೆ ಹಂಚಿಕೊಂಡರು. ಸಂಚಾಲಕಿ ಭಗಿನಿ ಪ್ರಶಾಂತಿ ಬಿ.ಎಸ್. ಮಕ್ಕಳ ಭವಿಷ್ಯ ನಿರ್ಮಾಣದಲ್ಲಿ ಪೋಷಕರ ಜವಾಬ್ದಾರಿಗಳ ಕುರಿತು ಪ್ರೇರಣಾದಾಯಕ ಸಂದೇಶ ನೀಡಿದರು.
ಶಿಕ್ಷಕರಾದ ಅನುಪಮ ಕಾರ್ಯಕ್ರಮ ನಿರೂಪಿಸಿ, ಲವೀನಾ ವಂದಿಸಿದರು.













