ಸಜಂಕಾಡಿ ಸ.ಹಿ.ಪ್ರಾ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ – ಶಿಕ್ಷಕ ಪೋಷಕರ ಸಭೆ

0

*ನಮ್ಮೂರ ಸರಕಾರಿ ಶಾಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳನ್ನು ದಾಖಲಿಸುವ ನಿಟ್ಟಿನಲ್ಲಿ ನಾವೆಲ್ಲ ಪ್ರಯತ್ನಿಸೋಣ…ರವಿರಾಜ ರೈ

*ನಮ್ಮೂರ ಶಾಲೆಯನ್ನು ಉಳಿಸಿ ಬೆಳೆಸಲು ನಾವೆಲ್ಲರೂ ಜೊತೆಯಾಗೋಣ -ಕುಕ್ಕ .ಎಂ

ಸಜಂಕಾಡಿ: ದ.ಕ.ಜಿ.ಪಂ.ಹಿ.ಪ್ರಾ ಶಾಲೆ ಸಜಂಕಾಡಿಯಲ್ಲಿ 2026-27ನೇ ಶಾಲಾ ಪ್ರಾರಂಭೋತ್ಸವ ಹಾಗೂ ಶಿಕ್ಷಕ ಪೋಷಕರ ಸಭೆ ಸಂಭ್ರಮದಿಂದ ನಡೆಯಿತು.

ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ರವಿರಾಜ ರೈ ಪುಟಾಣಿಗಳಿಗೆ ಸಿಹಿ ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿ, “ಎಲ್ಲ ಸೌಲಭ್ಯಗಳಿಂದ ಕೂಡಿರುವ ನಮ್ಮೂರ ಸರಕಾರಿ ಶಾಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳನ್ನು ದಾಖಲಿಸುವ ನಿಟ್ಟಿನಲ್ಲಿ ವಿದ್ಯಾಭಿಮಾನಿಗಳು ಸಹಕರಿಸಬೇಕು” ಎಂದರು.

ಮುಖ್ಯ ಅತಿಥಿಯಾಗಿದ್ದ ನಿವೃತ್ತ ಶಿಕ್ಷಣ ಸಂಯೋಜಕ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕುಕ್ಕ ಎಂ, “ನಮ್ಮೂರ ಶಾಲೆಯನ್ನು ಉಳಿಸಿ ಬೆಳೆಸಲು ನಾವೆಲ್ಲರೂ ಜೊತೆಯಾಗೋಣ” ಎಂದು ಕರೆ ನೀಡಿದರು.ಎಸ್.ಡಿ.ಎಂ.ಸಿ ಅಧ್ಯಕ್ಷೆ ಯಶೋಧ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಇಬ್ರಾಹಿಂ ಕೆ ವೇದಿಕೆಯಲ್ಲಿದ್ದರು.

ಹಿರಿಯ ಶಿಕ್ಷಕಿ ಶಶಿಕಲಾ ಬಿ.ಎನ್ ಸ್ವಾಗತಿಸಿದರು. ಪ್ರಭಾರ ಮುಖ್ಯಗುರು ಗಣೇಶ ನಾಯಕ್ ಪುತ್ತೂರು ಪ್ರಾಸ್ತಾವಿಕ ಮಾತನಾಡಿ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ವಿವರಿಸಿದರು.

ಪಠ್ಯ-ಸಮವಸ್ತ್ರ ವಿತರಣೆ:
ಸರಕಾರದಿಂದ ನೀಡಲಾಗುವ ಉಚಿತ ಪಠ್ಯಪುಸ್ತಕ ಹಾಗೂ ಸಮವಸ್ತ್ರ ವಿತರಿಸಲಾಯಿತು. ದಾನಿಗಳು ನೀಡಿದ ಉಚಿತ ನೋಟ್ ಪುಸ್ತಕ, ಐಡಿ ಕಾರ್ಡ್ ಹಾಗೂ ಬೆಲ್ಟ್‌ನ್ನು ವಿದ್ಯಾರ್ಥಿಗಳಿಗೆ ಹಂಚಲಾಯಿತು.ಶಿಕ್ಷಕಿ ಗಾಯತ್ರಿ ವಂದಿಸಿದರು. ಶಿಕ್ಷಕಿ ಆಯಿಷತ್ ಮಿಸ್ರಿಯಾ ನಿರೂಪಿಸಿದರು. ವಿದ್ಯಾರ್ಥಿಗಳ ಪೋಷಕರು, ಊರಿನ ಶಿಕ್ಷಣ ಪ್ರೇಮಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here