ನಾಣಿಲ ಶಾಲಾ ಪ್ರಾರಂಭೋತ್ಸವ

0

ಕಾಣಿಯೂರು: ಸ. ಹಿ.ಪ್ರಾ. ಶಾಲೆ ನಾಣಿಲದಲ್ಲಿ 2026- 27ನೇ ವರ್ಷದ ಶಾಲಾ ಪ್ರಾರಂಭೋತ್ಸವ ಹಾಗೂ ಶಿಕ್ಷಕ ಪೋಷಕರ ಮಾಹಾ ಸಭೆಯು ಇಂದು ನಾಣಿಲ ಶಾಲೆಯಲ್ಲಿ ನಡೆಯಿತು.

ಶಾಲಾ ಪ್ರಾರಂಭೋತ್ಸವದಲ್ಲಿ ಮಕ್ಕಳಿಗೆ ಹಣೆಗೆ ತಿಲಕ ಇಟ್ಟು ಗುಲಾಬಿ ಹೂಗಳನ್ನು ನೀಡಿ ಸ್ವಾಗತಿಸಲಾಯಿತು. ನಂತರ ನಡೆದ ಶಿಕ್ಷಕ ಪೋಷಕರ ಮಹಾಸಭೆಯ ಅಧ್ಯಕ್ಷತೆಯನ್ನು ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ವಸಂತ ದಲಾರಿಯವರು ವಹಿಸಿ, ಮಕ್ಕಳ ಶೈಕ್ಷಣಿಕ ಬೆಳವಣಿಗೆ ಹಾಗೂ ಶಾಲಾ ಅಭಿವೃದ್ಧಿಯಲ್ಲಿ ಪೋಷಕರ ಪಾತ್ರದ ಬಗ್ಗೆ ಮಾತನಾಡಿದರು.

ಇದೇ ಸಂದರ್ಭದಲ್ಲಿ ಸರಕಾರದ ವತಿಯಿಂದ ನೀಡುವ ಉಚಿತ ಪುಸ್ತಕ ಹಾಗೂ ಸಮವಸ್ತ್ರವನ್ನು ಮಕ್ಕಳಿಗೆ ವಿತರಿಸಲಾಯಿತು.

ವೇದಿಕೆಯಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ನೂತನ್ ಭಟ್ ಶಾಲಾ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ ಶೋಭಾ ಬಾಕಿಲ ಹಾಗೂ ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರುಗಳು, ಪೋಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು. ಮುಖ್ಯಗುರು ಪದ್ಮಯ ಗೌಡ ಪ್ರಾಸ್ತಾವಿಕದೊಂದಿಗೆ ಸ್ವಾಗತಿಸಿದರು. ಸಹ ಶಿಕ್ಷಕ ಸುನಿಲ್, ಗೌರವ ಶಿಕ್ಷಕಿಗಳಾದ ಶಿಶ್ಮಿತಾ ರೈ, ಸುಮಲತಾ ಸಹಕರಿಸಿದರು, ಸಹ ಶಿಕ್ಷಕಿ ನಂದಿನಿ ವಂದಿಸಿದರು.

LEAVE A REPLY

Please enter your comment!
Please enter your name here