







ನಾರಾಯಣ ಗುರುಗಳ ತತ್ವ ಸಂದೇಶ ಸಮಾಜಕ್ಕೆ ಮಾದರಿ: ಮನೋಹರ್ ಕುಮಾರ್


ನೆಲ್ಯಾಡಿ: ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ಆಶ್ರಯದಲ್ಲಿ ಬಿಲ್ಲವ ಗ್ರಾಮ ಸಮಿತಿ, ಬಿಲ್ಲವ ಮಹಿಳಾ ಗ್ರಾಮ ಸಮಿತಿ ಬಜತ್ತೂರು ಮತ್ತು ಯುವವಾಹಿನಿ ಉಪ್ಪಿನಂಗಡಿ ಘಟಕದ ಸಹಯೋಗದಲ್ಲಿ ಗುರುಪೂಜೆ, ಭಜನೆ, ವಾರ್ಷಿಕ ಮಹಾಸಭೆ ಮತ್ತು ಪುಸ್ತಕ ವಿತರಣಾ ಕಾರ್ಯಕ್ರಮ ಮೇ.31ರಂದು ಬಜತ್ತೂರು ಗ್ರಾಮದ ಮುದ್ಯ ಶ್ರೀ ಪಂಚಲಿಂಗೇಶ್ವರ ಸಭಾಭವನದಲ್ಲಿ ನಡೆಯಿತು.



ಗುರು ಸಂದೇಶ ನೀಡಿದ ಬೆಳ್ತಂಗಡಿ ತಾಲೂಕು ಅಪರ ಸರ್ಕಾರಿ ವಕೀಲರಾದ ಮನೋಹರ ಕುಮಾರ್ ಎ., ವಿಶ್ವ ಗುರು ಲೋಕಶಾಂತಿಯ ಹರಿಕಾರ ಬ್ರಹ್ಮಶ್ರಿ ನಾರಾಯಣ ಗುರುಗಳ ತತ್ವ ಸಂದೇಶಗಳು ವಿದ್ಯಾರ್ಥಿ ಸಮುದಾಯ ಹಾಗೂ ಸಮಾಜಕ್ಕೆ ಪ್ರೇರಣದಾಯಕ ಎಂದರು.
ಸಮಾಜದ ಹಿರಿಯರಾದ ಬಾಲಚಂದ್ರನ್ ಪರ್ದಾಂಜೆ ಕಾರ್ಯಕ್ರಮ ಉದ್ಘಾಟಿಸಿದರು. ತಾಲೂಕು ಬಿಲ್ಲವ ಸಂಘದ ಕಾರ್ಯದರ್ಶಿ ಮಹೇಶ್ಚಂದ್ರ ಸಾಲ್ಯಾನ್, ಕೋಶಾಧಿಕಾರಿ ಜನಾರ್ದನ ಪೂಜಾರಿ ಪದಡ್ಕ, ಯುವವಾಹಿನಿ ಉಪ್ಪಿನಂಗಡಿ ಘಟಕದ ಅಧ್ಯಕ್ಷ ಮನೋಜ್ ಎನ್.ಸಾಲ್ಯಾನ್, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಡಾ.ರಮ್ಯಾರಾಜರಾಮ್ ಶುಭ ಹಾರೈಸಿದರು.ಬಜತ್ತೂರು ಗ್ರಾಮ ಸಮಿತಿ ಅಧ್ಯಕ್ಷರಾದ ಸೋಮಸುಂದರ ಕೊಡಿಪಾನ ಅಧ್ಯಕ್ಷತೆ ವಹಿಸಿ, ಕಾರ್ಯಕ್ರಮ ಅರ್ಥಪೂರ್ಣವಾಗಿ ಮೂಡಿ ಬರಲು ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.
ಬಿಲ್ಲವ ಮಹಿಳಾ ಗ್ರಾಮ ಸಮಿತಿ ಅಧ್ಯಕ್ಷೆ ಮಮತಾ ಆಲಾಜೆ ವರದಿ ಮಂಡಿಸಿದರು. ಬಿಲ್ಲವ ಗ್ರಾಮ ಸಮಿತಿ ಅಧ್ಯಕ್ಷರಾದ ಸೋಮಸುಂದರ ಕೊಡಿಪಾನ ಸ್ವಾಗತಿಸಿ, ಮನೋಜ್ ಕುಮಾರ್ ವಂದಿಸಿದರು. ಕೀರ್ತನ ಪ್ರಾರ್ಥಿಸಿದರು.
ಸನ್ಮಾನ
ಕೆ.ಎಸ್.ಆರ್.ಟಿ.ಸಿ.ಯ ನಿವೃತ್ತ ಚಾಲಕ ನಾರಾಯಣ ಪೂಜಾರಿ ನೀರಕಟ್ಟೆ ಇವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಶೇ.90ಕ್ಕಿಂತ ಹೆಚ್ಚು ಅಂಕ ಪಡೆದ ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯರಾದ ಸಮೀಕ್ಷಾ ಆಲಾಜೆ, ಶರಣ್ಯ ಎಂಜಿರಡ್ಕ, ಮಧುಶ್ರೀ ವಳಾಲು ಹಾಗೂ ದ್ವೀತಿಯ ಪಿಯುಸಿ ವಿದ್ಯಾರ್ಥಿನಿಯರಾದ ಧನಲಕ್ಷ್ಮಿ ಡಿ., ಮಧುರ ಎಂ.ಡಿ.ಇವರನ್ನು ಗೌರವಿಸಲಾಯಿತು. ಸುಮಾರು 92 ವಿದ್ಯಾರ್ಥಿಗಳಿಗೆ ಪುಸ್ತಕವನ್ನು ವಿತರಿಸಲಾಯಿತು.










