






ರಾಮಕುಂಜ: ಕೊಯಿಲ ಗ್ರಾಮದ ಸಬಳೂರು ಸರ್ಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ನಡೆಯಿತು.


ಎಸ್ಡಿಎಂಸಿ ಅಧ್ಯಕ್ಷ ಶೇಖರ ಗೌಡ ಪಾಪುತಮಂಡೆ, ಮುಖ್ಯ ಶಿಕ್ಷಕಿ ವಾರಿಜ ಬಿ., ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಗಣೇಶ್ ಎರ್ಮಡ್ಕ ಸೇರಿದಂತೆ ಶಿಕ್ಷಕರು, ಪೋಷಕರು ವಿದ್ಯಾರ್ಥಿಗಳನ್ನು ಶಾಲಾ ಪ್ರವೇಶದ್ವಾರದ ಬಳಿ ಬ್ಯಾಂಡ್ ವಾದ್ಯದೊಂದಿಗೆ ಸ್ವಾಗತಿಸಿ, ಪುಷ್ಪಾರ್ಚನೆ ಮಾಡಿ ಬರಮಾಡಿಕೊಂಡರು. ಶಾಲಾ ಅವರಣವನ್ನು ತಳಿರು ತೋರಣಗಳಿಂದ ಶೃಂಗರಿಸಲಾಗಿತ್ತು. ಬಳಿಕ ಪೋಷಕರ ಸಭೆ ನಡೆಯಿತು. ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕ, ಸಮವಸ್ತ್ರ ವಿತರಣೆ ನಡೆಯಿತು.













