ಶ್ರೀ ರಾಮಕೃಷ್ಣ ಪ್ರೌಢಶಾಲೆಯ ಶಾಲಾ ಪ್ರಾರಂಭೋತ್ಸವ

0

ಪುತ್ತೂರು : ೨೦೨೬-೨೭ ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವವು ಮೇ.1ರಂದು ನೂತನವಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳನ್ನು ಆರತಿ ಬೆಳಗಿ, ತಿಲಕವಿಟ್ಟು ತರಗತಿ ಕೊಠಡಿಯೊಳಗೆ ಕರೆತರಲಾಯಿತು.

ನಂತರ ಎಂ.ಸುಂದರರಾಮ ಶೆಟ್ಟಿ ಸ್ಮಾರಕ ಬಂಟರಭವನದಲ್ಲಿ ನಡೆದ ಪ್ರಾರಂಭೋತ್ಸವದ ಸಭಾಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳನ್ನು ದೈಹಿಕ ಶಿಕ್ಷಣ ಶಿಕ್ಷಕ ಅಜಿತ್‌ರವರ ನೇತೃತ್ವದ ಎನ್.ಸಿ.ಸಿ. ವಿದ್ಯಾರ್ಥಿಗಳ ಬ್ಯಾಂಡ್‌ಸೆಟ್‌ನೊಂದಿಗೆ ಶಿಕ್ಷಕಿಯರು ಆರತಿ ಬೆಳಗಿ ಬರಮಾಡಿ ಕೊಂಡರು. ವಿದ್ಯಾರ್ಥಿಗಳ ಸ್ವಾಗತ ನೃತ್ಯದೊಂದಿಗೆ ಸರ್ವರನ್ನೂ ಸ್ವಾಗತಿಸಲಾಯಿತು.

ವಿದ್ಯಾರ್ಥಿಗಳನ್ನು ಪೋಷಕರ ಜೊತೆಗೆ ವೇದಿಕೆಗೆ ಬರಮಾಡಿಕೊಂಡು, ಪೋಷಕರ ಹಾಗೂ ಹಿರಿಯರ ಪಾದ ಮುಟ್ಟಿ ನಮಸ್ಕರಿಸಿ, ಆಶೀರ್ವಾದವನ್ನು ಪಡೆಯುವ ಮೂಲಕ ಗುರುಹಿರಿಯರನ್ನು ಗೌರವಿಸುವ ಸನ್ನಡತೆಯನ್ನು ತಿಳಿಸಿಕೊಡಲಾಯಿತು. ವೇದಿಕೆಯಲ್ಲಿ ಉಪಸ್ಥಿತರಿದ್ದ ಗಣ್ಯರಿಂದ ಜ್ಞಾನ ದೀವಿಗೆಯಾದ ಕಿರು ಹೊತ್ತಗೆಯನ್ನು ನೀಡಿ ವಿದ್ಯಾರ್ಥಿಗಳನ್ನು ಸ್ವಾಗತಿಸಿದರು. ಸುಸಂದರ್ಭದಲ್ಲಿ ಜೂನ್ ಮೊದಲ ವಾರದಲ್ಲಿ ಹುಟ್ಟು ಹಬ್ಬ ಆಚರಿಸಲಿರುವ ಇಬ್ಬರು ಅದೃಷ್ಟಶಾಲಿ ವಿದ್ಯಾರ್ಥಿಗಳು ಮತ್ತು ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ವಿಶಿಷ್ಟಶ್ರೇಣಿಯಲ್ಲಿ ಉತ್ತೀರ್ಣರಾದ 28 ವಿದ್ಯಾರ್ಥಿಗಳನ್ನು ಶಾಲು ಹೊದಿಸಿ, ಸಿಹಿನೀಡಿ ಅಭಿನಂದಿಸಲಾಯಿತು.


ಸಮಾರಂಭದ ಅಧ್ಯಕ್ಷ ಸ್ಥಾನವನ್ನು ವಹಿಸಿದ್ದ ಶಾಲಾ ಸಂಚಾಲಕರಾದ ಕಾವು ಹೇಮನಾಥ ಶೆಟ್ಟಿಯವರು, ದೀಪ ಬೆಳಗಿ ಸಭಾಕಾರ್ಯಕ್ರಮವನ್ನು ಉದ್ಘಾಟಿಸಿ, ಸಂಸ್ಥೆಯು ನಡೆದು ಬಂದ ದಾರಿ ಹಾಗೆಯೇ ಅಂತರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ಗಳಿಸಿದ ವಿಚಾರವನ್ನು ತಿಳಿಸಿ, ವಿದ್ಯಾರ್ಥಿಗಳ ಪ್ರತಿಭೆಗೆ ಸೂಕ್ತ ವೇದಿಕೆ ಕಲ್ಪಿಸುವಲ್ಲಿ ಶಿಕ್ಷಕಿಯರು ನೀಡುತ್ತಿರುವ ಮಾರ್ಗದರ್ಶನದ ಕುರಿತು ಮಾಹಿತಿ ನೀಡಿದರು.


ಕಾರ್ಯಕ್ರಮದಲ್ಲಿ ಅಡಳಿತ ಮಂಡಳಿಯ ಸದಸ್ಯರುಗಳಾದ ದಂಬೆಕ್ಕಾನ ಸದಾಶಿವ ರೈ, ದಯಾನಂದ ರೈ ಮನವಳಿಕೆಗುತ್ತು, ಜಯಪ್ರಕಾಶ್ ರೈ ನೂಜಿಬೈಲು, ನಿತ್ಯಾನಂದ ಶೆಟ್ಟಿ ನೆಲ್ಯಾಡಿ, ದಯಾನಂದ ರೈ ಕೋರ್ಮಂಡ, ವತ್ಸಲಾ ಪಿ ಶೆಟ್ಟಿ ಹಾಗೂ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಆನಂದ ಬಿ.ಡಿ. ರವರು ಉಪಸ್ಥಿತರಿದ್ದರು.


ಪ್ರಾಸ್ತಾವಿಕ ಮಾತುಗಳೊಂದಿಗೆ ಪ್ರಭಾರ ಮುಖ್ಯೋಪಾಧ್ಯಾಯಿನಿ ಗಾಯತ್ರಿ ಎಸ್ ಯವರು ಸ್ವಾಗತಿಸಿದರು. ವಿದ್ಯಾರ್ಥಿಗಳ ವಿವರವನ್ನು ಸಹಶಿಕ್ಷಕಿಯರಾದ ತುಳಸಿ ಕೆ ಹಾಗೂ ಸುಚಿತ್ರಾ ಕೆ.ಬಿ. ಯವರು ನಿರ್ವಹಿಸಿ ಸುಚಿತ್ರಾ ಕೆ.ಬಿ ರವರು ವಂದನಾರ್ಪಣೆಗೈದರು. ಶಿಕ್ಷಕಿಯರಾದ ಸಂಧ್ಯಾ ಕೆ ಹಾಗೂ ಹರ್ಷಿಣಿಯವರು ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here