ಪುರುಷರಕಟ್ಟೆ ಸರಸ್ವತಿ ವಿದ್ಯಾಮಂದಿರದಲ್ಲಿ ಶಾಲಾ ಪ್ರಾರಂಭೋತ್ಸವ : ದೀಕ್ಷಾ ಸಮಾರಂಭ, ವಸತಿ ನಿಲಯದ ವಿಸ್ತ್ರತ ಕೊಠಡಿ ಉದ್ಘಾಟನೆ

0

ಪುತ್ತೂರು: ಪುರುಷರಕಟ್ಟೆ ಸರಸ್ವತಿ ವಿದ್ಯಾ ಮಂದಿರ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಮತ್ತು ದೀಕ್ಷಾ ಸಮಾರಂಭ ಕಾರ್ಯಕ್ರಮಗಳು ಜೂ.3ರಂದು ನಡೆಯಿತು.


ಪ್ರಾರಂಭದಲ್ಲಿ ಎಲ್ಲಾ ವಿದ್ಯಾರ್ಥಿಗಳನ್ನು ಆರತಿ ಬೆಳಗಿ ತಿಲಕವಿಟ್ಟು ಸ್ವಾಗತಿಸಲಾಯಿತು. ಹೊಸದಾಗಿ ಸೇರ್ಪಡೆಯಾದ ವಿದ್ಯಾರ್ಥಿಗಳು ಸರಸ್ವತಿಗೆ ಪುಷ್ಷಾರ್ಚನೆ ಮಾಡುವ ಮೂಲಕ ಶಿಕ್ಷಣ ದೀಕ್ಷೆಯನ್ನು ಪಡೆದುಕೊಂಡರು.

ಈ ಸಂದರ್ಭದಲ್ಲಿ ಶಾಲಾ ವಸತಿ ನಿಲಯದ ವಿಸ್ತ್ರತ ಕೊಠಡಿಯು ಪುರೋಹಿತ ನಾರಾಯಣ ಐತಾಳ್ ಇವರ ನೇತೃತ್ವದಲ್ಲಿ ಗಣಹೋಮದೊಂದಿಗೆ ಶುಭಾರಂಭಗೊಂಡಿತ್ತು. ಸಂಚಾಲಕ ಅವಿನಾಶ್ ಕೊಡಂಕಿರಿ ಇವರು ಶಾಲೆಯ ಶೈಕ್ಷಣಿಕ ಸಾಧನೆಯ ಬಗ್ಗೆ ವಿವರಿಸಿದರು. ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ತೀರ್ಥರಾಮ ಸವಣೂರು, ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರಾದ ಸುರೇಶ್ ಭಟ್ ಸೂರ್ಡೇಲು, ವಿಶ್ವನಾಥ ಬಲ್ಯಾಯ ಶುಭ ಹಾರೈಸಿದರು. ಆಡಳಿತಾಧಿಕಾರಿ ಶುಭಾ ಅವಿನಾಶ್, ವಿದ್ಯಾರ್ಥಿ ಪೋಷಕರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಅಖಿಲಾ ಕೆ ಬಿ ಸ್ವಾಗತಿಸಿದರು. ಶಿಕ್ಷಕ ಶಿಕ್ಷಕೇತರ ವರ್ಗದವರು ಸಹಕರಿಸಿದರು.

LEAVE A REPLY

Please enter your comment!
Please enter your name here