






ಬಡಗನ್ನೂರು: ಬಡಗನ್ನೂರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ 2006-27 ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಹಾಗೂ ದಾಖಲಾತಿ ಆಂದೋಲನ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳನ್ನು ಶಿಕ್ಷಕರು, ಎಸ್ ಡಿ ಎಂ ಸಿ, ಪೋಷಕರು ಹಾಗೂ ಊರವರು ವಾದ್ಯಘೋಷಗಳೊಂದಿಗೆ ಮೆರವಣಿಗೆಯ ಮೂಲಕ ಕರೆತಂದು ಪುಷ್ಪಾರ್ಚನೆ ಮಾಡಿ ಸಿಹಿ ನೀಡುವುದರ ಮೂಲಕ ಬರಮಾಡಿಕೊಳ್ಳಲಾಯಿತು.


ಸಭಾ ಕಾರ್ಯಕ್ರಮ
ಕಾರ್ಯಕ್ರಮವನ್ನು ಹಿರಿಯ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ನಾರಾಯಣ ರೈ ಕುದ್ಕಾಡಿ ರವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ, ಮಾತನಾಡಿ ಸರಕಾರಿ ಶಾಲೆಯ ಉಳಿವಿಗೆ ನಾವೆಲ್ಲರೂ ಒಗ್ಗಟ್ಟಾಗಿ ಕೈಜೋಡಿಸಬೇಕು ಎಂದು ಹೇಳಿ ಶುಭ ಹಾರೖೆಸಿದರು.



ಅಕ್ರಮ ಸಕ್ರಮ ಸಮಿತಿಯ ಸದಸ್ಯರಾದ ಮಹಮ್ಮದ್ ಬಡಗನ್ನೂರು ಮಕ್ಕಳಿಗೆ ಉಚಿತ ಪಠ್ಯಪುಸ್ತಕವನ್ನು ವಿತರಿಸಿ, ಅತೀ ಹೆಚ್ಚಿನ ಮಕ್ಕಳಿರುವ ಈ ಶಾಲೆಯು ಮೊದಲಿನಂತೆ ದಾಖಲಾತಿಯನ್ನು ಹೆಚ್ಚಿಸಲು ಎಲ್ಲರ ಸಹಕಾರ ಅತ್ಯಗತ್ಯ ಎಂದು ಹೇಳಿದರು.
ಪ್ರಗತಿಪರ ಕೃಷಿಕ ಜಯಂತ ರೈ ಕುದ್ಕಾಡಿ, ಮಕ್ಕಳಿಗೆ ಸಮವಸ್ತ್ರ ವಿತರಿಸಿ ಮಾತನಾಡಿ ಶಾಲೆಯ ಉಳಿವಿಗಾಗಿ ನಾವೆಲ್ಲರೂ ಶ್ರಮಿಸಬೇಕಾದ ಅಗತ್ಯವಿದೆ ಎಂದು ಹೇಳಿ ಶುಭ ಹಾರೈಸಿದರು. ಕಾರ್ಯಕ್ರಮವು ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಗಿರೀಶ್ ಗೌಡ ಕನ್ನಯ ಅಧ್ಯಕ್ಷತೆಯಲ್ಲಿ ನಡೆಯಿತು .
ಶಾಲಾ ಮುಖ್ಯಗುರು ಕುಮಾರ್ ಕೆ ಜೆ ರವರು ಕಾರ್ಯಕ್ರಮ ಕುರಿತು ಪ್ರಾಸ್ತಾವಿಕ ನುಡಿಗಳನ್ನಾಡಿದರು. ವೇದಿಕೆಯಲ್ಲಿ ಪಂಚಾಯತ್ ಮಾಜಿ ಸದಸ್ಯ ಸಂತೋಷ್ ಆಳ್ವ, ಗಿರಿಮನೆ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುರೇಶ್ ರೈ ಪಳ್ಳತ್ತಾರು, ನಿವೃತ್ತ ಶಿಕ್ಷಕಿ ಹರಿಣಾಕ್ಷಿ ಎ, ಎಸ್ ಡಿ ಎಂ ಸಿ ಮಾಜಿ ಅಧ್ಯಕ್ಷ ಮಹಾಲಿಂಗ ಪಾಟಾಳಿ,ಎಸ್ ಡಿ.ಎಂ.ಸಿ. ಉಪಾಧ್ಯಕ್ಷೆ ಸುಲೋಚನಾ ನೇರ್ಲಂಪಾಡಿ, ಹಿರಿಯ ವಿದ್ಯಾರ್ಥಿ ಸಂಘದ ಕೋಶಾಧಿಕಾರಿ ಸುಬ್ರಾಯ ನಾಯಕ್ ಮೇಗಿನಮನೆ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಸದಸ್ಯರು, ಮಕ್ಕಳ ಪೋಷಕರು ಹಾಗೂ ಹಿರಿಯ ವಿದ್ಯಾರ್ಥಿಗಳು ಮತ್ತು ಶಿಕ್ಷಣಾಭಿಮಾನಿಗಳು ಭಾಗವಹಿಸಿದ್ದರು. ಶಾಲಾಭಿವೃದ್ಧಿ ಸಮಿತಿ ಮಾಜಿ ಅಧ್ಯಕ್ಷ ಮಹಾಲಿಂಗ ಪಾಟಾಳಿ ಮತ್ತು ಮನೆಯವರು ಸಿಹಿತಿಂಡಿಯ ವ್ಯವಸ್ಥೆ ಮಾಡಿದ್ದರು ಮಧ್ಯಾಹ್ನ ಎಲ್ಲರಿಗೂ ಸಿಹಿ ಊಟದ ವ್ಯವಸ್ಥೆಯನ್ನು ಅಕ್ಷರದಾಸೋಹ ಸಿಬ್ಬಂದಿಯವರು ಅಚ್ಚುಕಟ್ಟಾಗಿ ನಿರ್ವಹಿಸಿದರು.
ಶಾಲಾ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಪದವೀಧರ ಶಿಕ್ಷಕಿ ವಿಜಯಲಕ್ಷ್ಮಿ ಸ್ವಾಗತಿಸಿ, ವಂದಿಸಿದರು. ಮಧುಶ್ರೀ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿಯರಾದ ಸರಿತಾ,ಲಕ್ಷ್ಮಿ, ಯಶಸ್ವಿನಿ ಸಹಕರಿಸಿದರು.










