ಪಾಪೆಮಜಲು ಸರಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ- ಮೆರವಣಿಗೆ ಮೂಲಕ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

0

ಪುತ್ತೂರು: ಪಾಪೆಮಜಲು ಸರಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ ಜೂ.1ರಂದು ನಡೆಯಿತು. ಶಾಲೆಗೆ ನೂತನವಾಗಿ ದಾಖಲಾದ ವಿದ್ಯಾರ್ಥಿಗಳನ್ನು ಮೆರವಣಿಗೆ ಮೂಲಕ ಪುಷ್ಪಾರ್ಚನೆ ಮಾಡಿ, ಸಿಹಿ ತಿಂಡಿ ನೀಡಿ ಸ್ವಾಗತಿಸಲಾಯಿತು. ನಂತರ ನಡೆದ ಸಭಾ ಕಾರ್ಯಕ್ರಮವನ್ನು ಶಾಲಾ ಕಾರ್ಯಧ್ಯಕ್ಷ ಇಕ್ಬಾಲ್ ಹುಸೇನ್ ದೀಪ ಬೆಳಗಿಸಿ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಸರಕಾರದಿಂದ ನೀಡಲಾದ ಪಠ್ಯಪುಸ್ತಕ ಸಮವಸ್ತ್ರವನ್ನು ವಿತರಿಸಿ ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ಉಚಿತವಾಗಿ ಅಗತ್ಯವಿರುವ ಕೊಡೆ, ಬ್ಯಾಗುಗಳನ್ನು ನೀಡುವುದಾಗಿ ಭರವಸೆ ನೀಡಿದರು.


ಶಾಲಾ ಶಿಕ್ಷಕರಾದ ರಘು ಬಿ, ಪ್ರೀತಾ ಎಂ ಟಿ, ಸ್ಮಿತಾ ಕೆ ಎನ್, ಪ್ರವೀಣ ರೈ, ಸವಿತಾ ಪಿ ಪಠ್ಯಪುಸ್ತಕ, ಸಮವಸ್ತ್ರ ಮತ್ತು ಅಗತ್ಯ ಸಾಮಗ್ರಿಗಳು, ಆರೋಗ್ಯ, ಸ್ವಚ್ಛತೆ ಮತ್ತು ಸುರಕ್ಷತಾ ಕ್ರಮಗಳು, ವಿದ್ಯಾರ್ಥಿಗಳ ಹಾಜರಾತಿ ಮತ್ತು ಮೌಲ್ಯಮಾಪನ ಕ್ರಮಗಳು, ವಾರ್ಷಿಕ ಶೈಕ್ಷಣಿಕ ಕಾರ್ಯಕ್ರಮಗಳ ಪರಿಚಯ, ವಿದ್ಯಾರ್ಥಿ ನಾಯಕತ್ವ ಹಾಗೂ ವಿವಿಧ ಸಮಿತಿಗಳ ರಚನೆ ಕುರಿತು ಮಾಹಿತಿ. ಪೋಷಕರ ಸಹಕಾರದ ಮಹತ್ವ, ಶೈಕ್ಷಣಿಕ, ಸಹಶೈಕ್ಷಣಿಕ ಮತ್ತು ಆಡಳಿತಾತ್ಮಕ ಚಟುವಟಿಕೆಗಳ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಸಮಗ್ರ ಮಾಹಿತಿ ಒದಗಿಸಿದರು. ವೇದಿಕೆಯಲ್ಲಿ ವಿವೇಕಾನಂದ ಯುವಕ ಸಂಘದ ಗೌರವಾಧ್ಯಕ್ಷ ಬಾಲಕೃಷ್ಣ ಕುಲಾಲ್, ರಮೇಶ್ ಪರ್ಪುಂಜ, ಎಸ್‌ಡಿಎಂಸಿ ಸದಸ್ಯರಾದ ಹೊನ್ನಪ್ಪ ನಾಯ್ಕ, ಚಂದ್ರ ಗುಂಡ್ಯಡ್ಕ, ರೇವತಿ ಉಪಸ್ಥಿತರಿದ್ದರು.
ಸಹಶಿಕ್ಷಕಿ ಹರಿಣಾಕ್ಷಿ ವಂದಿಸಿದರು, ಶಿಕ್ಷಕಿ ಶಾಲೆಟ್ ಜೇನ್ ರೆಬೆಲ್ಲೋ ಸಹಕರಿಸಿದರು.

LEAVE A REPLY

Please enter your comment!
Please enter your name here