







ಆಲಂಕಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಕಡಬ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಕಡಬ ಇವುಗಳ ಆಶ್ರಯದಲ್ಲಿ ಶ್ರೀ ದುರ್ಗಾಂಬಾ ಪದವಿ ಪೂವ ಕಾಲೇಜು ಮತ್ತು ಪ್ರೌಢ ಶಾಲಾ ವಿಭಾಗ ಆಲಂಕಾರು ಇದರ ಸಹಕಾರದೊಂದಿಗೆ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಅಂಗವಾಗಿ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗಾಗಿ ಮಾಹಿತಿ ಕಾರ್ಯಗಾರವು ಜೂ.4ರಂದು ಶ್ರೀ ದುರ್ಗಾಂಬಾ ಪದವಿ ಪೂರ್ವ ಕಾಲೇಜು ಆಲಂಕಾರಿನಲ್ಲಿ ಜರಗಿತು.





ಕಾರ್ಯಗಾರವನ್ನು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಡಬ ತಾಲೂಕಿನ ನಿಕಟ ಪೂರ್ವ ಅಧ್ಯಕ್ಷರಾದ ಮಹೇಶ್ ಕೆ ಸವಣೂರು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಬೀಡಿ,ಸಿಗರೇಟ್,ಗುಡ್ಕ ಇನ್ನಿತರ ಚಟಗಳಿಗೆ ಬಳಿಯಾಗದೇ ಉತ್ತಮ ಜೀವನ ನಡೆಸಿದಲ್ಲಿ ಬದುಕಿನ ಉದ್ದಕ್ಕೂ ಒಳ್ಳೆಯ ಆರೋಗ್ಯ ಮತ್ತು ನೆಮ್ಮದಿಯನ್ನು ಕಾಣಬಹುದಾಗಿದೆ ಎಂದರು. ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಆಲಂಕಾರು ಶ್ರೀ ದುರ್ಗಾಂಬಾ ಪದವಿ ಪೂರ್ವ ಕಾಲೇಜಿನ ಅಧ್ಷಕ್ಷರಾದ ದಯಾನಂದ ರೈ ಮನವಳಿಕೆ ಮಾತನಾಡಿ ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ಅವಶ್ಯಕತೆ ಇದೆ. ವಿದ್ಯಾರ್ಥಿಗಳಲ್ಲಿ ದುಶ್ಚಟಗಳಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸಿದಾಗ ಅಂತಹ ವಿದ್ಯಾರ್ಥಿಗಳು ದುಶ್ಚಟಕ್ಕೆ ಬಳಿಯಾಗದೇ ಉತ್ತಮ ರೀತಿಯಲ್ಲಿ ಬದುಕನ್ನು ನಡೆಸಲು ಸಾಧ್ಯವಿದೆ ಎಂದರು.

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ತಾಲೂಕು ಅಧ್ಯಕ್ಷರಾದ ಇಂದುಶೇಖರ ಶೆಟ್ಟಿ ಮಾತನಾಡಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯು ಮಕ್ಕಳಲ್ಲಿ ದುಶ್ಚಟ ಮುಕ್ತ ಸಮಾಜದ ನಿರ್ಮಾಣಕ್ಕೆ ಒತ್ತನ್ನು ನೀಡುತ್ತಾ ಬಂದಿದೆ.ಈ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮ ಆಯೋಜನೆ ಮಾಡುವುದರ ಮೂಲಕ ಮಕ್ಕಳಲ್ಲಿ ಮತ್ತು ಪೋಷಕರಲ್ಲಿ ಅರಿವು ಮೂಡಿಸುವ ಕೆಲಸವನ್ನು ಮಾಡುತ್ತಾ ಬರುತ್ತಿದೆ ಎಂದರು. ಸಂಪನ್ಮೂಲ ವ್ಯಕಿಗಳಾಗಿ ಆಗಮಿಸಿರುವ ಸವಣೂರು ಪ್ರೌಢ ಶಾಲೆಯ ಶಿಕ್ಷಕರರಾದ ಕಿಶಾನ್ ಬಿ ವಿ ಮಾತನಾಡಿ ಮಕ್ಕಳು ತಂಬಾಕು ಸೇವನೆ ಮಾದಕ ವ್ಯಸನಗಳಿಂದ ದೂರವಿದ್ದು, ಉತ್ತಮ ಸಮಾಜದ ನಿರ್ಮಾಣಕ್ಕೆ ತಮ್ಮನ್ನು ತೊಡಗಿಸಿಕೊಳ್ಳಬೇಕು ಆಗ ಮಾತ್ರ ನಾವು ಪಡೆದುಕೊಂಡ ಶಿಕ್ಷಣ ಸಂಸ್ಕಾರಕ್ಕೆ ಒತ್ತು ನೀಡಿದಂತಾಗುತ್ತದೆ. ದುಶ್ಚಟಕ್ಕೆ ಬಳಿಯಾದ ವ್ಯಕ್ತಿಯೂ ಬದುಕಿನ ಉದ್ದಕ್ಕೂ ಕಷ್ಟ ನೋವುಗಳನ್ನು ಅನುಭವಿಸಬೇಕಾಗುತ್ತದೆ ಎಂದರು.
ವೇದಿಕೆಯಲ್ಲಿ ಆಲಂಕಾರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಜಾತ, ಶ್ರೀ ದುರ್ಗಾಂಬಾ ಪದವಿ ಪೂರ್ವ ಕಾಲೇಜಿನ ಆಡಳಿತಾಧಿಕಾರಿ ಶ್ರೀಪತಿ ರಾವ್, ಶ್ರೀ ದುರ್ಗಾಂಬಾ ಪ್ರೌಢ ಶಾಲೆಯ ಮುಖ್ಯಗುರುಗಳಾದ ನವೀನ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಪ್ರೇಮ, ರೇಖಾ, ಒಕ್ಕೂಟದ ಅಧ್ಯಕ್ಷರಾದ ಹರೀಶ್ ಸಹಕರಿಸಿದ್ದರು. ಯೋಜನಾಧಿಕಾರಿ ಪ್ರಕಾಶ್ ಕುಮಾರ್ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಶ್ರೀ ದುರ್ಗಾಂಬಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರೂಪ ವಂದಿಸಿದರು. ಆಲಂಕಾರು ವಲಯ ಮೇಲ್ವಿಚಾರಕಾರದ ಲತಾ ಕಾರ್ಯಕ್ರಮ ನಿರೂಪಿಸಿರು.










