






ಪುತ್ತೂರು: ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ಪನ್ಯ ಗುರಿಯಡ್ಕ ಶಾಲಾ ಪ್ರಾರಂಭೋತ್ಸವ ಹಾಗೂ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ, ಸಮವಸ್ತ್ರ ವಿತರಣೆ ನಡೆಯಿತು. ಎಸ್‌ಡಿಎಂಸಿ ಅಧ್ಯಕ್ಷ ಆದಂ ಶಫಿಯುಲ್ಲಾ, ಕಡಬ ಪಟ್ಟಣ ಪಂಚಾಯತ್ ಕೌನ್ಸಿಲರ್ ಫೈಝಲ್, ಎಸ್‌ಡಿಎಂಸಿ ಮಾಜಿ ಅಧ್ಯಕ್ಷ ಇಬ್ರಾಹಿಂ ಟಿ.ಎಚ್., ಅಂಗನವಾಡಿ ಕಾರ್ಯಕರ್ತೆ ಜೈನಾಬಿ ಹಾಗೂ ಶಾಲಾ ಶಿಕ್ಷಕರು, ಎಸ್‌ಡಿಎಂಸಿ ಸದಸ್ಯರು, ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


ಉಚಿತ ಅಟೋಸೇವೆ
ಕಡಬ ಪಟ್ಟಣ ಪಂಚಾಯತ್ ಕೌನ್ಸಿಲರ್ ಫೈಝಲ್ ಹಾಗೂ ಹಿರಿಯ ವಿದ್ಯಾರ್ಥಿಗಳ ಸಹಕಾರದಿಂದ ವಿದ್ಯಾರ್ಥಿಗಳಿಗೆ ಉಚಿತವಾಗಿ ಅಟೋ ವ್ಯವಸ್ಥೆ ಕಲ್ಪಿಸಿದ್ದಾರೆ. ಒಂದು ವರ್ಷದ ಶೈಕ್ಷಣಿಕ ಅವಧಿಗೆ ಎರಡು ಅಟೋಗಳನ್ನು ಬಾಡಿಗೆಗೆ ನಿಗದಿಪಡಿಸಿ ವಿದ್ಯಾರ್ಥಿಗಳನ್ನು ಮನೆಯಿಂದ ಶಾಲೆಗೆ ಕರೆತಂದು ಪುನಃ ಮನೆಗೆ ಬಿಡುವ ಕಾರ್ಯ ಮಾಡಿದ್ದಾರೆ. ಇದರಿಂದ ಶಾಲೆಗೆ 11 ವಿದ್ಯಾರ್ಥಿಗಳ ಹೆಚ್ಚುವರಿ ಸೇರ್ಪಡೆಯೂ ಆಗಿದೆ ಎಂದು ಫೈಝಲ್ ಕಡಬ ತಿಳಿಸಿದ್ದಾರೆ.













