ಅಗ್ನಿವೀರ್‌ಗೆ ಆಯ್ಕೆಯಾದ ಹಿರಿಯ ವಿದ್ಯಾರ್ಥಿಗೆ ಉಪ್ಪಿನಂಗಡಿ ಶ್ರೀರಾಮ ಶಾಲೆಯಲ್ಲಿ ಗೌರವಾರ್ಪಣೆ

0

ಪುತ್ತೂರು: ಉಪ್ಪಿನಂಗಡಿ ಶ್ರೀರಾಮ ಶಾಲೆಯ ಹಿರಿಯ ವಿದ್ಯಾರ್ಥಿ ರಂಜಿತ್ ಅವರು ಭಾರತೀಯ ಭೂಸೇನೆಯ ಅಗ್ನಿವೀರ್‌ಗೆ ಆಯ್ಕೆಯಾಗಿದ್ದು, ಈ ಹಿನ್ನೆಲೆಯಲ್ಲಿ ಶಾಲಾ ವತಿಯಿಂದ ಅವರಿಗೆ ಗೌರವಾರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ರಂಜಿತ್ ಅವರು ಬೆಳ್ತಂಗಡಿ ತಾಲೂಕು ನಡ ಗ್ರಾಮದ ಅಂತ್ರಾಯಪಲ್ಕೆ ಮನೆಯ ಶ್ಯಾಂ ಸುಂದರ್ ಮತ್ತು ಪುಷ್ಪಾವತಿ ದಂಪತಿಯ ಪುತ್ರ.

ದೇಶಸೇವೆಗಾಗಿ ಆಯ್ಕೆಯಾದ ರಂಜಿತ್ ಅವರ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದರು.ಅಗ್ನಿವೀರ್‌ಗೆ ಆಯ್ಕೆಯಾಗಿರುವ ರಂಜಿತ್ ಅವರ ಸಾಧನೆ ಯುವ ಪೀಳಿಗೆಗೆ ಮಾದರಿಯಾಗಿದ್ದು, ಗ್ರಾಮಕ್ಕೆ ಹೆಮ್ಮೆ ತಂದಿದೆ ಎಂದು ಶಾಲಾ ಮುಖ್ಯಸ್ಥರು ಈ ಸಂದರ್ಭದಲ್ಲಿ ತಿಳಿಸಿದರು.

LEAVE A REPLY

Please enter your comment!
Please enter your name here