ಶಾಂತಿನಗರ ಪ್ರೌಢಶಾಲೆ ಮುಖ್ಯೋಪಾಧ್ಯಾಯ ವಿಷ್ಣು ಪ್ರಸಾದ್ ಸಿ ಅವರಿಗೆ ಬೀಳ್ಕೊಡುಗೆ

0

ಪುತ್ತೂರು: ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಪಿಎಂ ಪೋಷನ್ ನಿರ್ಮಾಣ ಯೋಜನೆಯ ಸಹಾಯಕ ನಿರ್ದೇಶಕರಾಗಿ ಸೇವೆ ಸಲ್ಲಿಸಿ, ಶಾಂತಿನಗರ ಪ್ರೌಢಶಾಲೆ ಮುಖ್ಯೋಪಾಧ್ಯಾಯರಾಗಿ ನಿವೃತ್ತರಾದ ವಿಷ್ಣು ಪ್ರಸಾದ್ ಸಿ ಅವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ಜೂನ್.3ರಂದು ಶಾಂತಿನಗರ ಪ್ರೌಢಶಾಲಾ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಎಸ್‌ಡಿಎಂಸಿ ಅಧ್ಯಕ್ಷ ಪ್ರಕಾಶ್ ಗೌಡ, ಕೋಡಿಂಬಾಡಿ ಕ್ಲಸ್ಟರ್‌ನ ಸಂಪನ್ಮೂಲ ವ್ಯಕ್ತಿ ದೇವಕಿ, ಶಾಂತಿನಗರ ಪ್ರೌಢಶಾಲೆಯ ಸಹ ಶಿಕ್ಷಕಿ ಜಯಂತಿ ಜೆ., ವಿದ್ಯಾರ್ಥಿಗಳಾದ ಸಂಶೀನಾ ಮತ್ತು ಕು. ಭೂಮಿಕ ಅವರು ವಿಷ್ಣು ಪ್ರಸಾದ್ ಸಿ ಅವರ ಸೇವೆಯನ್ನು ಸ್ಮರಿಸಿ, ನಿವೃತ್ತ ಜೀವನಕ್ಕೆ ಶುಭ ಹಾರೈಸಿದರು. ಬಳಿಕ ಶಾಲಾ ಶಿಕ್ಷಕರು, ಎಸ್‌ಡಿಎಂಸಿ ಅಧ್ಯಕ್ಷರು ಮತ್ತು ಸದಸ್ಯರು, ಕೋಡಿಂಬಾಡಿ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿಗಳು ವಿಷ್ಣು ಪ್ರಸಾದ್ ಸಿ ಅವರನ್ನು ಸನ್ಮಾನಿಸಿ ಗೌರವಿಸಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಶ್ರೀ ವಿಷ್ಣು ಪ್ರಸಾದ್ ಸಿ ಅವರು ತಮ್ಮ ವೃತ್ತಿ ಜೀವನದ ಅನುಭವಗಳನ್ನು ಹಂಚಿಕೊಂಡು, ಸನ್ಮಾನಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.ಪ್ರಭಾರ ಮುಖ್ಯೋಪಾಧ್ಯಾಯರಾದ ಧನಲಕ್ಷ್ಮಿ ಸ್ವಾಗತಿಸಿದರು. ಶಿಕ್ಷಕ ಲಿಂಗಪ್ಪ ಎನ್. ವಂದಿಸಿದರು. ಶಿಕ್ಷಕಿ ಜ್ಯೋತಿ ರಾಣಿ ಕಾರ್ಯಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಣ ನಿರ್ದೇಶಕಿ ನಿರ್ಮಲಾ ರೋಡ್ರಿಗಸ್ ಹಾಗೂ ದೀಪಾ ಎಂ ಸಹಕರಿಸಿದರು. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here