ಜೂ.7: ಇರ್ದೆ ಬೆಟ್ಟಂಪಾಡಿ ಪ್ರಾ.ಕೃ.ಪ.ಸಹಕಾರ ಸಂಘದಲ್ಲಿ ಉಚಿತ ಕಣ್ಣಿನ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ

0

ಬೆಟ್ಟಂಪಾಡಿ:  ಇರ್ದೆ-ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ, ಬೆಟ್ಟಂಪಾಡಿ, ರೋಟರಿ ಕ್ಲಬ್ ಪುತ್ತೂರು ಕಣ್ಣಿನ ಆಸ್ಪತ್ರೆ ನಿರ್ವಹಣೆ ಪ್ರಸಾದ್ ನೇತ್ರಾಲಯ, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮಂಗಳೂರು ಇದರ ನೇತೃತ್ವದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ಅಂಧತ್ವ ನಿವಾರಣಾ ವಿಭಾಗ) ಮಂಗಳೂರು, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ (ರಿ.), ಸೆಂಚುರಿ ಗ್ರೂಪ್ ಬೆಂಗಳೂರು, ಡಾ| ಪಿ. ದಯಾನಂದ ಪೈ ಮತ್ತು ಸತೀಶ್ ಪೈ ಚಾರಿಟೇಬಲ್ ಟ್ರಸ್ಟ್ (ರಿ.), ನ್ಯಾಶನಲ್ ಮೆಡಿಕೋಸ್ ಆರ್ಗನೈಸೇಶನ್, ಅಬ್ಕೋ (ABCO) ಸ್ಟೀಲ್ ಪ್ರೈ. ಲಿಮಿಟೆಡ್ ಮಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಉಚಿತ ಕಣ್ಣಿನ ತಪಾಸಣಾ ಮತ್ತು ಚಿಕಿತ್ಸಾ ಶಿಬಿರವು ಜೂ. 07 ರಂದು ಬೆಳಗ್ಗೆ ಗಂಟೆ 10:00ರಿಂದ ಮಧ್ಯಾಹ್ನ 2:00ರ ತನಕ  ಇರ್ದೆ-ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಭವನದಲ್ಲಿ ನಡೆಯಲಿದೆ.


ರಂಗನಾಥ ರೈ ಕೆ. ಎಸ್., ನಿಕಟಪೂರ್ವ ಅಧ್ಯಕ್ಷರು, ಇರ್ದೆ-ಬೆಟ್ಟಂಪಾಡಿ ಪ್ರಾ.ಕೃ.ಪ.ಸ. ಸಂಘದ ನಿಕಟಪೂರ್ವ ಅಧ್ಯಕ್ಷ ಕೆ.ಎಸ್.‌ ರಂಗನಾಥ ರೈ ಗುತ್ತು ಶಿಬಿರವನ್ನು ಉದ್ಘಾಟಿಸಲಿದ್ದಾರೆ. ಸಂಘದ ಅಧ್ಯಕ್ಷ, ಎಸ್‌ಸಿಡಿಸಿಸಿ ಬ್ಯಾಂಕ್‌ ನಿರ್ದೇಶಕ, ದ.ಕ. ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷ ಶಿಕುಮಾರ್ ರೈ ಬಾಲೊಟ್ಟುರವರು ಸಭಾಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪಾಣಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ವೈದ್ಯಾಧಿಕಾರಿ ಡಾ| ವೇದಾವತಿ ಬಲ್ಲಾಳ್, ನಾಟಿ ವೈದ್ಯರಾದ ದೇವಿಪ್ರಸಾದ್ ಬೀಡು, ಜಿ.ಪಂ. ಮಾಜಿ ಸದಸ್ಯೆ ಮೀನಾಕ್ಷಿ ಮಂಜುನಾಥ ಭಾಗವಹಿಸಲಿದ್ದಾರೆ.
ಶಿಬಿರದಲ್ಲಿ ಭಾಗವಹಿಸುವ ಶಿಬಿರಾರ್ಥಿಗಳಿಗೆ ವಿಶೇಷ ಸೂಚನೆ ಈ ರೀತಿ ಇರುತ್ತದೆ.


* ಯಶಸ್ವಿನಿ ಕಾರ್ಡ್ ಹೊಂದಿರುವ ಫಲಾನುಭವಿಗಳಿಗೆ ಉಚಿತ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ.
* ಅಂತ್ಯೋದಯ ಕಾರ್ಡುದಾರರಿಗೆ ಉಚಿತ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ.
* ಶಸ್ತ್ರಚಿಕಿತ್ಸೆಗೆ ಆಯ್ಕೆಯಾದವರನ್ನು ನಿಗದಿತ ದಿನಾಂಕದಲ್ಲಿ ಪುತ್ತೂರು ಪ್ರಸಾದ್ ನೇತ್ರಾಲಯ ಕಣ್ಣಿನ ಆಸ್ಪತ್ರೆಗೆ ಉಚಿತವಾಗಿ ಕರೆದುಕೊಂಡು ಹೋಗಿ ಕರೆದುಕೊಂಡು ತಂದು ಬಿಡಲಾಗುವುದು.
* ಎಪಿಎಲ್ ಮತ್ತು ಬಿಪಿಎಲ್ ಕಾರ್ಡುದಾರರಿಗೆ ರಿಯಾಯಿತಿ ದರದಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗುವುದು.
* ರಿಯಾಯಿತಿ ದರದಲ್ಲಿ ಕನ್ನಡಕ ನೀಡಲಾಗುವುದು. (ರೂ. 500-00).

LEAVE A REPLY

Please enter your comment!
Please enter your name here