ಇರ್ದೆ ಬೆಟ್ಟಂಪಾಡಿ ಪ್ರಾ.ಕೃ.ಪ.ಸಹಕಾರ ಸಂಘದಲ್ಲಿ ಇಲೆಕ್ಟ್ರಿಕ್‌ ವಾಹನಗಳ ಖರೀದಿ ಮೇಲೆ ಶೇ.11 ಬಡ್ಡಿದರದಲ್ಲಿ ಸಾಲ

0

ಬೆಟ್ಟಂಪಾಡಿ: ಜಾಗತಿಕ ಇಂಧನ ಬಿಕ್ಕಟ್ಟಿನ ಪರಿಣಾಮವಾಗಿ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನತೆಗೆ ಕರೆ ನೀಡಿರುವಂತೆ ಇಂಧನ ಉಳಿತಾಯಕ್ಕಾಗಿ ಜನರು ಇಲೆಕ್ಟ್ರಿಕ್‌ ವಾಹನ ಖರೀದಿಗೆ ಮುಂದಾಗಬೇಕಾದ ಹಿನ್ನೆಲೆಯಲ್ಲಿ ಸಹಕಾರ ಸಂಘಗಳು ತಮ್ಮ ಸಾಲ ಸೌಲಭ್ಯ ನೀಡುವಲ್ಲಿ ವಿಶೇಷ ಆಫರ್‌ ನೀಡುತ್ತಿದೆ. ಅದರಂತೆ ಇರ್ದೆ ಬೆಟ್ಟಂಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿಯೂ ಇಲೆಕ್ಟ್ರಿಕ್‌ ವಾಹನಗಳ ಖರೀದಿ ಮೇಲೆ ಶೇ.11 ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಕೊಡುವ ವ್ಯವಸ್ಥೆ ಮಾಡಲಾಗಿದೆ. ಈ ವಿಶೇಷ ಆಫರ್‌ ಜೂ.1ರಿಂದ ಡಿಸೆಂಬರ್‌ 31ರ ತನಕ ಇರಲಿದ್ದು, ಸಂಘದ ಸದಸ್ಯರು ಇದರ ಪ್ರಯೋಜ ಪಡೆದುಕೊಳ್ಳುವಂತೆ ಸಂಘದ ಅಧ್ಯಕ್ಷ ಶಶಿಕುಮಾರ್‌ ರೈ ಬಾಲ್ಯೊಟ್ಟು ಹಾಗೂ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ರಾಮಯ್ಯ ರೈ ಪಿ. ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here