







ಕೋಡಿಂಬಾಡಿ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಕೋಡಿಂಬಾಡಿ ಗ್ರಾಮ ಪಂಚಾಯಿತಿ ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಡಿಂಬಾಡಿ ಜಂಟಿಯಾಗಿ ಗಿಡಗಳನ್ನು ನೆಡುವುದರ ಮೂಲಕ ಕಾರ್ಯಕ್ರಮ ಆಚರಿಸಲಾಯಿತು.


ಶಾಲಾ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿಕ್ಷಕರು, ಶಾಲಾ ಮಕ್ಕಳು, ಪಂಚಾಯತ್ ಸಿಬ್ಬಂದಿಗಳು, ಪೋಷಕರು ಹಾಗೂ ಶಾಲಾಭಿವೃದ್ಧಿ ಸಮಿತಿ ಸದಸ್ಯರು ಭಾಗವಹಿಸಿ ಸಸಿಗಳನ್ನು ನೆಟ್ಟರು.ಪರಿಸರ ಸಂರಕ್ಷಣೆಯ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲಾಯಿತು.













